ಬೆಂಗಳೂರು: ವೇತನ ಪರಿಷ್ಕರಣೆ ಭರವಸೆ ಬೆನ್ನಲ್ಲೇ ರಾಜ್ಯ ಸಾರಿಗೆ ನೌಕರರಿಗೆ ಮತ್ತೊಂದು ಭಾಗ್ಯ .ಇನ್ಮೇಲೆ ನೌಕರರಿಗೆ ಸಿಗಲಿದೆ ನಗದು ರಹಿತ ಚಿಕಿತ್ಸೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಬಹುದಿನಗಳ ಕನಸು ನನಸಾಗಿದೆ. ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ಸರ್ಕಾರಿ ಒಡೆತನದ ಸಾರಿಗೆ ಸಂಸ್ಥೆಗಳ ಪೈಕಿ ಮೊದಲನೆಯ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.
ಆರೋಗ್ಯ ಕಾರ್ಡ್ ಪ್ರಯೋಜನಗಳೇನು ?
ಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಮತ್ತು ಆಯುರ್ವೇದಿಕ್ ಸೇರಿದಂತೆ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಯಂತೆ ಕೆಎಸ್ಆರ್ಟಿಸಿ ನೌಕರರು, ಕಾರ್ಮಿಕರು ಈ ಆಸ್ಪತ್ರೆಗಳಲ್ಲಿ ನಗದು ಇಲ್ಲದೆ ಚಿಕಿತ್ಸೆ ಪಡೆಯಬಹುದಾಗಿದೆ. ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಯಲ್ಲೂ ಕೆಎಸ್ಆರ್ಟಿಸಿ ನೌಕರರು, ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ.