ಕಲಬುರಗಿ: ರಾಜ್ಯದಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ನಿಮ್ಮ ಕಲಬುರಗಿಯಲ್ಲೆ ಇದ್ದಾರೆ. ಏನೇ ಇದ್ದರೂ ಅವರನ್ನೇ ಕೇಳಿ ಅಂತಾ ಹರಿಪ್ರಸಾದ್ ಹೇಳಿದ್ದಾರೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈ ರೀತಿಯಲ್ಲಿ ಚರ್ಚೆಗಳು ಗೊಂದಲಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಸಿಎಂ ಬದಲಾವಣೆ ಸೇರಿದಂತೆ ಎಲ್ಲಾ ಕೆಲಸಗಳನ್ನು ಹೈಕಮಾಂಡ್ ನೋಡಿಕೊಳ್ಳಲಿ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದರು
ಸಿ.ಎಂ. ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು; ಬಿ.ಕೆ.ಹರಿಪ್ರಸಾದ್
RELATED ARTICLES