Wednesday, January 28, 2026
27.9 C
Bengaluru
Google search engine
LIVE
ಮನೆ#Exclusive Newsನಂದಿನಿ ಹಾಲಿನ ದರ 5 ರೂ. ಹೆಚ್ಚಿಸುವಂತೆ ಸುಳಿವು ನೀಡಿದ KMF

ನಂದಿನಿ ಹಾಲಿನ ದರ 5 ರೂ. ಹೆಚ್ಚಿಸುವಂತೆ ಸುಳಿವು ನೀಡಿದ KMF

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಸುದ್ದಿಯಲ್ಲಿರುವ ಕರ್ನಾಟಕ ಹಾಲು ಒಕ್ಕೂಟ (KMF) ಮತ್ತೆ ನಂದಿನಿ ಹಾಲಿನ ದರ ಪರಿಷ್ಕರಣೆಗೆ ಮುಂದಾಗಿದ್ದು, ಹೊಸ ವರ್ಷದಿಂದ ಪ್ರತೀ ಲೀಟರ್ ಹಾಲಿನ ದರದಲ್ಲಿ 5 ರೂಪಾಯಿ ಏರಿಕೆ ಮಾಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.

ಹೌದು.. ಆರು ತಿಂಗಳ ಹಿಂದೆಯಷ್ಟೇ ಕರ್ನಾಟಕದಲ್ಲಿ ನಂದಿನಿ ಹಾಲುದರ ಏರಿಕೆಯಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆಗೆ ಕೆಎಂಎಫ್ ಮುಂದಾಗಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂ. ಏರಿಸುವ ಕುರಿತು ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷ ಎಲ್‌. ಭೀಮಾನಾಯ್ಕ ಅವರು ಗುರುವಾರ ಮುನ್ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾವನೆ ಹೋಗಿದ್ದು, ಸರ್ಕಾರದ ಹಂತದಲ್ಲಿ ದರ ಏರಿಕೆ ಕುರಿತಾಗಿ ತೀರ್ಮಾನ ಕೈಗೊಳ್ಳಬೇಕು ಎನ್ನುವ ಅಭಿಪ್ರಾಯವನ್ನು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ ಹೇಳಿದ್ದಾರೆ.

‘ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷದಲ್ಲಿ ರೈತರಿಗೆ ಕನಿಷ್ಠ 5 ರೂ.ನಷ್ಟು ಹಾಲಿನ ದರ ಹೆಚ್ಚಿಸುವ ಮೂಲಕ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ನೀಡಲಿದ್ದಾರೆ. ಸಿಎಂ ಶೀಘ್ರದಲ್ಲೇ ರಾಜ್ಯದ ಒಕ್ಕೂಟಗಳ ಅಧ್ಯಕ್ಷರ ಸಭೆ ಕರೆದು, ಹಾಲು ಉತ್ಪಾದಕ ರೈತರಹಿತ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ನಂದಿನಿ ಹಾಲಿನ ದರ 2 ರೂ ಇಳಿಕೆ, 50ML ಹೆಚ್ಚುವರಿ ಹಾಲು ಕಡಿತ

ಇದೇ ವೇಳೆ ಈ ಹಿಂದೆ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ 50 ಎಂಎಲ್ ಹೆಚ್ಚುವರಿ ಹಾಲನ್ನು ಕಡಿತ ಮಾಡಿ ಅದರ ದರವನ್ನೂ ಕೂಡ 2 ರೂನಷ್ಟು ಇಳಿಕೆ ಮಾಡಲಾಗುತ್ತದೆ ಎಂದು ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಕೆಎಂಎಫ್‌ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್‌ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್‌ ಹೆಚ್ಚಿಸಿ ದರವನ್ನೂ 2 ರೂ. ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಭೀಮಾನಾಯ್ಕ್‌ ತಿಳಿಸಿದ್ದಾರೆ.

ಈ ಹಿಂದೆ ಜೂನ್‌ 25ರಂದು 1000 ಎಂಎಲ್‌ ಹಾಲಿಗೆ 50 ಎಂಎಲ್‌ ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ ಮಾರಾಟ ಮಾಡುವ ಘೋಷಣೆ ಮಾಡಲಾಗಿತ್ತು. ಜೂನ್‌ 26ರಿಂದಲೇ ಹೊಸ ತೀರ್ಮಾನ ಜಾರಿಗೆ ಬಂದಿತ್ತು. ಈ ವೇಳೆ ಹಾಲಿನ ದರವನ್ನು ಲೀಟರ್‌ಗೆ 44 ರೂ.ನಿಂದ 46 ರೂ.ಗೆ ಏರಿಕೆ ಮಾಡಲಾಗಿತ್ತು. ಹಾಗೆಯೇ 22 ರೂ. ಇದ್ದ 500 ಎಂಎಲ್‌ ಪ್ಯಾಕೆಟ್ ಹಾಲಿಗೂ 50 ಎಂಎಲ್ ಹೆಚ್ಚುವರಿ ಸೇರಿಸಲಾಗಿತ್ತು. ಹಾಗೂ ದರವನ್ನು 24 ರೂ.ಗೆ ಏರಿಕೆ ಮಾಡಲಾಗಿತ್ತು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments