Wednesday, April 30, 2025
24 C
Bengaluru
LIVE
ಮನೆ#Exclusive NewsTop News69ನೇ ಕನ್ನಡ ರಾಜ್ಯೋತ್ಸವ: ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ

69ನೇ ಕನ್ನಡ ರಾಜ್ಯೋತ್ಸವ: ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ

ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಹೇಳಿದ್ದಾರೆ.

ಕರ್ನಾಟಕದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಇಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸುವರ್ಣ ಕರ್ನಾಟಕ ವರ್ಷಚಾರಣೆಯನ್ನು ಜನೋತ್ಸವವಾಗಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ರಾಜ್ಯೋತ್ಸವ ಪ್ರಶಸ್ತಿ ಜತೆಗೆ, ಕರ್ನಾಟಕ ಸಂಭ್ರಮದ ಪ್ರಯುಕ್ತ 50 ಮಹಿಳಾ ಸಾಧಕರು, 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಕೂಡ ಈ ಬಾರಿ ಘೋಷಣೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂ. ನಗದನ್ನೂ ಒಳಗೊಂಡಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments