#Exclusive NewsTop Newsರಾಜ್ಯಸುದ್ದಿ

ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮಾರಾಟವಾಗಿದೆ : ಬರೋಬ್ಬರಿ 308 ಕೋಟಿ ರೂ.

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರುಪಾಯಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್​ಬಿಸಿಎಲ್​ನಿಂದ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮಾರಾಟವಾಗಿದೆ.

ಐಎಂಎಲ್ 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ. ಬಿಯರ್- 2,92,339 ಲಕ್ಷ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರುಪಾಯಿ ‌ಆದಾಯ ಸಂಗ್ರಹವಾಗಿದೆ.

 

Comments (0)

Your email address will not be published. Required fields are marked *

Back to top button