ಆಂಧ್ರಪ್ರದೇಶದ ತಿರುಪತಿಯ ವಿಷ್ಣು ನಿವಾಸದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ದರ್ಶನ ಟೋಕನ್ ವಿತರಣೆ ವೇಳೆ ಈ ಘಟನೆ ನಡೆದಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ. ಹಲವರು ಗಾಯಗೊಂಡಿದ್ದು, ರಾಜ್ಯ ಸರ್ಕಾರ ನೆರವು ನೀಡುತ್ತಿದೆ.
ಗುರುವಾರ (ಜ.8) ಬೆಳಗ್ಗೆ 5 ಗಂಟೆಯಿಂದ ಶ್ರೀನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್‌ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್ ನೀಡಲು ಟಿಟಿಡಿ ಯೋಜಿಸಿತ್ತು. ಆದರೆ, ಟೋಕನ್‌ಗಳಿಗಾಗಿ ಬುಧವಾರ ಸಂಜೆಯೇ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.