Top Newsಜಿಲ್ಲೆಸುದ್ದಿ

ಮತ್ತೆ ಆಶಾ ಕಾರ್ಯಕರ್ತೆಯರ ಸಮರ..!

ಗದಗ: ನಗರದ ಡಿಸಿ ಕಚೇರಿ ಮುಂದೆ ಹತ್ತು ಸಾವಿರ ರೂ. ಗೌರವಧನದ ಅಧಿಕೃತ ಆದೇಶ ನೀಡಬೇಕೆಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ರು.

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಹತ್ತು ಸಾವಿರ ನೀಡುತ್ತೇವೆ ಎಂದು ಭರವಸೆ ನೀಡಿದ್ರು. ಆದರೆ, ಸರ್ಕಾರ ರಚನೆಯಾಗಿ 2 ವರ್ಷ ಕಳೆದರೂ ಕೊಟ್ಟ ಭರವಸೆ ಈಡೇರಿಸಿಲ್ಲ. ಕೂಡಲೇ ಗೌರವಧನ ಹೆಚ್ಚಿಸಬೇಕು, ಇಲ್ಲದಿದ್ದರೇ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಆಶಾ ಕಾರ್ಯಕರ್ತೆಯರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ರು. ಇನ್ನು ಈ ಪ್ರತಿಭಟನೆಯಲ್ಲಿ ಸುರೇಶ್ ಜಿ. ಕಾರ್ಯದರ್ಶಿ ಲಕ್ಷ್ಮಿ ಪೂಜಾರ್, ಉಪಾಧ್ಯಕ್ಷೆ ಪ್ರೇಮಾ ಪಾಟೀಲ್  ಉಪಸ್ಥಿತರಿದ್ದರು.

Comments (0)

Your email address will not be published. Required fields are marked *

Back to top button