ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅಖಾಡಕ್ಕೆ ಇಳಿಯಲಿದ್ದಾರೆ. ಎಂಜಿನಿಯರಿಂಗ್, ಎಂಬಿಎ ಪದವೀಧರರಾಗಿದ್ದು, ಉದ್ಯಮ ಕ್ಷೇತ್ರದಿಂದ ಸಕ್ರಿಯ ರಾ ಜಕೀಯಕ್ಕೆ ಪ್ರವೇಶಿಸಿದ್ದಾರೆ. ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ (35) ಅವರು 1989 ಮಾರ್ಚ್ 31 ರಂದು ಜನಿಸಿದ್ದಾರೆ. ಅಮೆರಿಕಾದ ಇಂಡಿ ಯಾನಾ ಪರ್ಡ್‌ಯೂ ವಿಶ್ವವಿದ್ಯಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾಭ್ಯಾಸ ಪೂರೈಸಿದ್ದಾರೆ. ಸಿಂಗಾಪುರ ಯುನಿವರ್ಸಿಟಿಯಲ್ಲಿ ಎಂಬಿಎ ವ್ಯಾಸಂಗ ಮಾಡಿದ್ದು, ವಿದ್ಯಾಭ್ಯಾಸದ ಬಳಿಕ ಉದ್ಯಮದ ಕಡೆ ಆಸಕ್ತಿ ತೋರಿ ಹಲವು ಕಂಪನಿಗೆಳನ್ನು ಕಟ್ಟಿ ಬೆಳೆಸಿದ್ದಾರೆ. ಯುವ ಉದ್ಯಮಿಯಾಗಿ ಸಾವಿರಾರು ಜನರಿಗೆ ಉದ್ಯೋಗದಾತರೂ ಆಗಿದ್ದಾರೆ. ಅಜ್ಜ ಎಸ್.ಆರ್ ಬೊಮ್ಮಾಯಿ, ಅಪ್ಪ ಬಸವರಾಜ ಬೊಮ್ಮಾಯಿ ಅವರ ಬಳಿಕ ಮೂರನೇ ತಲೆಮಾರಿನ ಭರತ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಬೊಮ್ಮಾಯಿ ಕುಟುಂಬದ ಮೂರನೇ ಕುಡಿ ರಾಜಕೀಯಕ್ಕೆ ಎಂಟ್ರಿ!
0
8
ಹಿಂದಿನ ಲೇಖನ
RELATED ARTICLES