ಬೆಂಗಳೂರು: ಸ್ಯಾಂಡಲ್ ವುಡ್ ಕಾಮಿಡಿ ಆ್ಯಕ್ಟರ್ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜೆಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿ ಪಾವನಾ ಎಂಬುವವರ ಜೊತೆ ಚಿಕ್ಕಣ್ಣ ಮದುವೆ ನಡೆಯಲಿದೆ.
ಇತ್ತೀಚೆಗೆ ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಾಗಿ ಕಾಣೆಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. ಪಾವನಾ ಉದ್ಯಮಿಯಾಗಿದ್ದಾರೆ. ಮೆಕಾನಿಕಲ್ ಇಂಜೆನಿಯರ್ ಎಂದು ಕೂಡ ತಮ್ಮ ಬಯೋದಲ್ಲಿ ಪಾವನಾ ಬರೆದುಕೊಂಡಿದ್ದಾರೆ.
ಚಿಕ್ಕಣ್ಣ ಹಾಗೂ ಪಾವನಾ ಅವರ ಮದುವೆಯ ನಿಶ್ಚಯವಾಗಿದೆ. ಹಾಗೂ ನಿಶ್ಚತಾರ್ಥ ದಿನಾಂಕದ ಬಗ್ಗೆ ಅಧಿಕೃತ ಘೋಷಣೆಯಾಗಿಲ್ಲ. ಆದರೆ ಶೀಘ್ರದಲ್ಲೇ ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಗಲಿದೆ ಎಂದು ಹೇಳಲಾಗುತ್ತಿದೆ.
ಹುಡುಗಿಯ ಮನೆಯಲ್ಲಿ ಹೂ ಮುಡಿಸುವ ಶಾಸ್ತ್ರ ನೆರವೇರಿದೆ. ಎರಡೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾತುಕತೆ ನಡೆದಿದೆ.ಯುವತಿಗೆ ಹೂ ಮುಡಿಸಿ ಮದುವೆ ನಿಶ್ಚಯಿಸಲಾಗಿದೆ.
ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್ ಮೀಡಿಯಾದಲ್ಲಿ ಚಿಕ್ಕಣ್ಣ ಮದುವೆ ಬಗ್ಗೆ ಗುತ್ತಗಿದ್ದ ಬಳಿಕ ಅದೆಲ್ಲಾ ಸುಳ್ಳು ಎಂದು ಗೊತ್ತಾಗಿತ್ತು. ಕಳೆದ ವರ್ಷ ಉಪಾಧ್ಯಕ್ಷ ಚಿತ್ರದ ಮೂಲಕ ಹೀರೊ ಆಗಿ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದರು. ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ .