ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Deve Gowda) ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಭೇಟಿಯಾದರು. ಕಾರ್ಯಕ್ರಮದ ನಿಮಿತ್ತ ಉಪರಾಷ್ಟ್ರಪತಿ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ನಗರದ ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿ ಮಾಜಿ ಪ್ರಧಾನಿಯನ್ನು ಭೇಟಿಯಾದರು.

ಉಪರಾಷ್ಟ್ರಪತಿ ಜಗದೀಪ್‌ ಹಾಗೂ ಅವರ ಪತ್ನಿ ಸುದೇಶ್ ಧನಕರ್ ಅವರಿಗೆ ಹೂಗುಚ್ಛ ನೀಡಿ ಮಾಜಿ ಪ್ರಧಾನಿ ದೇವೇಗೌಡರು ಸ್ವಾಗತ ಕೋರಿದರು. ಪರಸ್ಪರರು ಕುಶಲೋಪರಿ ವಿಚಾರಿಸಿಕೊಂಡರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಹಾಜರಿದ್ದರು. ಜಗದೀಪ್ ಧನಕರ್ ಅವರು, ದೇವೇಗೌಡರು ಹಾಗೂ ಅವರ ಪತ್ನಿ ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಅವರ ಮನೆಯಲ್ಲಿ ಉಪಾಹಾರ ಸ್ವೀಕರಿಸಿದರು. ನಂತರ ಉಪರಾಷ್ಟ್ರಪತಿ ದಂಪತಿ ಜೊತೆಗೆ ದೇವೇಗೌಡರ ಕುಟುಂಬ ಸದಸ್ಯರೆಲ್ಲರೂ ಸೇರಿ ಫೋಟೋ ತೆಗೆಸಿಕೊಂಡರು.

Leave a Reply

Your email address will not be published. Required fields are marked *

Verified by MonsterInsights