Thursday, November 20, 2025
19.1 C
Bengaluru
Google search engine
LIVE
ಮನೆಕ್ರಿಕೆಟ್ವಿಘ್ನೇಶ್ ಪುತ್ತೂರು ಎಂಬ ಬೆರಗು..!

ವಿಘ್ನೇಶ್ ಪುತ್ತೂರು ಎಂಬ ಬೆರಗು..!

ಚೆನ್ನೈ: ವಿಘ್ನೇಶ್ ಪುತ್ತೂರು, ಐಪಿಎಲ್​ ಶುರವಾದ ಮೇಲೆ ಅತಿ ಹೆಚ್ಚು ಚರ್ಚೆಯಲ್ಲಿರುವ ಹೆಸರಿದು. ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಮುಂಬೈ ಇಂಡಿಯನ್ಸ್ ನ ಮೊದಲ ಪಂದ್ಯದಲ್ಲಿಯೇ ಮೂರು ವಿಕೆಟ್ ಪಡೆಯುವ ಮೂಲಕ ವಿಘ್ನೇಶ್ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ.

ಕೇರಳದ ಆಟೋ ಡ್ರೈವರ್​ರೊಬ್ಬರ ಮಗ 24 ವರ್ಷದ ವಿಘ್ನೇಶ್ ಮೊದಲ ಪಂದ್ಯದಲ್ಲಿಯೇ ಅಬ್ಬರಿಸಿದ್ದಲ್ಲದೇ, ಕ್ರಿಕೆಟ್‌  ಮಹೇಂದ್ರ ಸಿಂಗ್‌ ಧೋನಿ ಅವರಿಂದಲೂ ಭುಜ ತಟ್ಟಿ ಮೆಚ್ಚುಗೆ ಪಡೆದಿರುವ ಈ ಬೌಲರ್‌ ಭರವಸೆ ಮೂಡಿಸಿದ್ದಾರೆ.

ಭಾನುವಾರ ನಡೆದ ಪಂದ್ಯದಲ್ಲಿ ಇಂಪ್ಯಾಕ್ಸ್‌ ಆಟಗಾರನಾಗಿ ಕಣಕ್ಕೆ ಇಳಿದ ವಿಘ್ನೇಶ್‌ ಮೂರು ವಿಕೆಟ್‌ ಪಡೆದು ಮಿಂಚಿದ್ದರು. ರೋಹಿತ್ ಶರ್ಮಾ ಬದಲಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದ ವಿಘ್ನೇಶ್ ತಮ್ಮ ಸ್ಪಿನ್‌ ಮೋಡಿಯಿಂದ ಆಕರ್ಷಿಸಿದರು.

ಮತ್ತೊಂದು ವಿಶೇಷವೆಂದರೆ ವಿಘ್ನೇಶ್‌ ಅವರು ಕೇರಳ ಪರ ಹಿರಿಯರ ಮಟ್ಟದಲ್ಲಿ ಈ ವರೆಗೆ ಒಂದೇ ಒಂದು ಪಂದ್ಯವನ್ನೂ ಆಡಿದವರಲ್ಲ. ಆದರೂ ಘಟಾನುಘಟಿಗಳ ಅಖಾಡಕ್ಕೆ ಧುಮುಕಿ ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಂಡರು, ಫೀಲ್ಡಿಂಗ್‌ನಲ್ಲೂ ವಿಘ್ನೇಶ್‌ ಗಮನ ಸೆಳೆದರು.

ಬಲಗೈ ಬ್ಯಾಟರ್‌ ಹಾಗೂ ಎಡಗೈ ಸ್ಪಿನ್ ಬೌಲರ್‌ ಆಗಿರುವ ವಿಘ್ನೇ ಕೇರಳದ ಮಲಪ್ಪುರಂ ಜಿಲ್ಲೆಯ ಪೆರಿಂಥಲ್ಮನ್ ನಿವಾಸಿ. 14 ವರ್ಷದೊಳಗಿನ ಮತ್ತು 19 ವರ್ಷದೊಳಗಿನ ಮಟ್ಟದಲ್ಲಿ ಕೇರಳ ಪರ ಮಾತ್ರ ಆಡಿದ್ದಾರೆ. ಆದರೆ ತಮಿಳುನಾಡು ಪ್ರೀಮಿಯರ್ ಲೀಗ್‌ನಲ್ಲಿಯೂ ಸಹ ಆಡಿದ್ದಾರೆ. ಟಾಟಾ ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಈ ಆಟಗಾರನನ್ನು ಮೂಲ ಬೆಲೆ ₹30 ಲಕ್ಷಕ್ಕೆ ತೆಕ್ಕೆಗೆ ಹಾಕಿಕೊಂಡಿತು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments