ಮೈಸೂರು: ನವೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸ್ಫೋಟಕ ಹೇಳಿಕೆ ನೀಡಿದ್ಧಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಡೆ ಇದೆ. ಡಿ.ಕೆ.ಶಿವಕುಮಾರ್ ನಡೆ ಸಿದ್ದರಾಮಯ್ಯ ಕಡೆ ಇದೆ. ಆದರೆ ಶಾಸಕರ ನಡೆ ಬೇರೆ ಕಡೆ ಇದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದೊಳಗಿನ ಅಸ್ಥಿರತೆ ಮತ್ತು ನಾಯಕತ್ವ ಸಂಘರ್ಷವನ್ನು ಎತ್ತಿ ತೋರಿಸಿ, ನವೆಂಬರ್ ಅಥವಾ ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಅಲ್ಲೋಲ-ಕಲ್ಲೋಲ ಉಂಟಾಗುವುದು ಸ್ಪಷ್ಟ. ಯಾರು ತಡೆಯಲಾರರು ಎಂದು ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯ ಅವರು ಆತುರದಿಂದ ಜಾತ್ರೆಗಳು ಮತ್ತು ಸಮಾವೇಶಗಳನ್ನು ನಡೆಸುತ್ತಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್‌ಗೆ ನೇರ ಧಮಕಿಯಾಗಿದೆ. ಕಳೆದ ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ನಡೆದ ಶಕ್ತಿ ಪ್ರದರ್ಶನವನ್ನು ನೆನಪಿಸಿಕೊಂಡ ಅವರು, ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಹಿಂದಿಕ್ಕಿ, ರ್ಯಾಂಪ್‌ವಾಕ್ ಮಾಡಿ ತಮ್ಮ ಪ್ರಾಬಲ್ಯ ತೋರಿಸಿದ್ದರು ಎಂದು ಹೇಳಿದರು.
ಇನ್ನು ಈಗ ಕಾಂಗ್ರೆಸ್‌ನ ಹಿರಿಯ ಸಚಿವರು ಆಕ್ಟೋಬರ್-ನವೆಂಬರ್‌ನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಕೆಸಿ ವೇಣುಗೋಪಾಲ್ ಅವರ ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡಬೇಡಿ, ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ. ಆದರೆ ನಾಯಕತ್ವ ಬದಲಾವಣೆ ಆಗಲ್ಲ ಎಂದು ಎಲ್ಲಿಯೂ ಹೇಳಿಲ್ಲ ಎಂದು ಹೇಳಿದ್ದಾರೆ..


