#Exclusive NewsTop Newsರಾಜಕೀಯರಾಜ್ಯಸುದ್ದಿ

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಪುರಾವೆ ಇಲ್ಲ : ಡಾ.ಜಿ.ಪರಮೇಶ್ವರ

ಬೆಂಗಳೂರು : ಬೀದರ್ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಯಾವುದೇ ಸಾಕ್ಷ್ಯವಿಲ್ಲದೆ ಬಿಜೆಪಿ ಅನಗತ್ಯವಾಗಿ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಸಿಐಡಿ ತನಿಖೆಯಿಂದ ಸತ್ಯ ಹೊರಬೀಳಲಿದೆ. ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯ ಒಳಗೆ ಮತ್ತು ಹೊರಗೆ ಹಲವಾರು ಸಂದರ್ಭಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ತಪ್ಪುಗಳನ್ನು ಸಾರ್ವಜನಿಕವಾಗಿ ಎತ್ತಿ ತೋರಿಸಿದ್ದಾರೆ. ಹೀಗಾಗಿ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದರು.

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಡೆತ್‌ನೋಟ್‌ನಲ್ಲಿ ತಮ್ಮ ಹೆಸರಿಲ್ಲ ಎಂದು ಸ್ವತಃ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಬಿಜೆಪಿ ಅನಾವಶ್ಯಕ ಗೊಂದಲ ಉಂಟುಮಾಡುತ್ತಿದೆ ಎಂದರು. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಈ ಮಟ್ಟಕ್ಕೆ ಇಳಿಯಬಾರದು. ಈ ಹಿಂದೆ ನಾವೂ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದೇವೆ. ಸರ್ಕಾರ ನಡೆಸುವಾಗ ನಾವೆಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ್ದೇವೆ.

ಪ್ರಿಯಾಂಕ್ ಖರ್ಗೆ ಕೂಡ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಯಾವುದೇ ಪೂರಕ ಸಾಕ್ಷ್ಯಗಳಿದ್ದರೆ ನಾವು ಸ್ವೀಕರಿಸುತ್ತೇವೆ ಎಂದು ಹೇಳಿದರು.

Comments (0)

Your email address will not be published. Required fields are marked *

Back to top button