ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

ರಾಮನಗರ: ಬಿಜೆಪಿ ಹಾಗೂ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬುದು ಗೋತ್ತಾಗಿ ಆ ಪಕ್ಷದ ಮುಖಂಡರುಗಳು ಮತ್ತು ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಚನ್ನಪಟ್ಟಣದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಪಕ್ಷಕ್ಕೆ ಸೇರಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಕುಮಾರಸ್ವಾಮಿ ತನ್ನ ಅಧಿಕಾರ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಬಿಜೆಪಿ ನಾಯಕರೇ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುತ್ತಾರೆ. ಅವರ ಪಕ್ಷ ಗಟ್ಟಿಯಾಗಿ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ಸಮಯ ಬಂದಾಗ ಉತ್ತರ ನೀಡುತ್ತೇನೆ. ಬಿಜೆಪಿಯಲ್ಲಿ ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂದೂ ಗೊತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಗುಂಪು ಗುಂಪಾಗಿ ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ. ಎಲ್ಲೋ ಹಳ್ಳಿಗಳಲ್ಲಿ ಭಿನ್ನಾಭಿಪ್ರಾಯದಿಂದ ಒಂದಿಬ್ಬರು ಮಾತ್ರ ನಮ್ಮ ಪಕ್ಷ ಬಿಟ್ಟಿರಬಹುದು. ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನರಿಗೆ ಒಳ್ಳೆಯದಾಗಲು ಸಾಧ್ಯ ಎಂದು ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ” ಎಂದು ತಿಳಿಸಿದರು.




