ಚನ್ನಪಟ್ಟಣ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಪೂರ್ಣಗೊಳಿಸುತ್ತದೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದರು.
ತಮ್ಮ ಮೊಮ್ಮಗ ಮತ್ತು ಚನ್ನಪಟ್ಟಣದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಸತತ ಐದನೇ ದಿನ ಪ್ರಚಾರದಲ್ಲಿ ಪಾಲ್ಗೊಂಡ ದೇವೇಗೌಡ ಅವರು ಹಲವಾರು ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿದರು.ಐದು ಗ್ಯಾರಂಟಿಗಳ ಪೈಕಿ ಒಂದು ಗ್ಯಾರಂಟಿ ಈಗಾಗಲೇ ನೆಲಕಚ್ಚಿದೆ. ಇತರೆ ಗ್ಯಾರಂಟಿಗಳೂ ಹೆಚ್ಚು ಕಾಲ ಉಳಿಯುವುದಿಲ್ಲ. ಈ ಸರ್ಕಾರವೂ ಪೂರ್ಣಾವಧಿ ಪೂರ್ಣಗೊಳಿಸುತ್ತದೆ ಎಂಬ ಗ್ಯಾರಂಟಿ ಇಲ್ಲ ಎಂದು ಹೇಳಿದರು.
ಬಳಿಕ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್‌ನಲ್ಲಿ ನನ್ನ ಮುಂದೆ ನಿಲ್ಲುವ ನೈತಿಕತೆ ಯಾವ ರಾಜಕಾರಣಿಗೂ ಇಲ್ಲ ಎಂದು ಹೇಳಿದರು.