ಬೆಂಗಳೂರು ಸಂಚಾರ ವ್ಯವಸ್ಥೆ ನಿಯಂತ್ರಣಕ್ಕೆ ಎಐ ಬಳಕೆ ಹಿನ್ನಲೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹಾಗೂ ಸಂಚಾರ ಜಂಟಿ ಆಯುಕ್ತ ಎಂ.ಎನ್. ಅನುಚೇತ್ ಇಂದು ಸುದ್ದಿಗೋಷ್ಠಿ ಮಾಡಿದ್ದು, ಆಂಬ್ಯುಲೆನ್ಸ್ಗೆ ದಾರಿ ಬಿಟ್ಟಾಗ ಸಂಚಾರ ನಿಯಮ ಉಲ್ಲಂಘನೆಯಾದರೆ ದಂಡವಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು, ಅಕ್ಟೋಬರ್ 09: ಆಂಬ್ಯುಲೆನ್ಸ್ಗೆ (ambulance) ದಾರಿ ಬಿಟ್ಟಾಗ ಚಲನ್ ಆದರೆ ಅವರ ಟ್ರಾಫಿಕ್ ಫೈನ್ ಮನ್ನಾ ಮಾಡುತ್ತೇವೆ ಎಂದು ಸಂಚಾರ ವಿಭಾಗ ಜಂಟಿ ಆಯುಕ್ತ ಎಂ.ಎನ್ ಅನುಚೇತ್ ಹೇಳಿದ್ದಾರೆ. ನಗರದಲ್ಲಿ ಸಂಚಾರ ವ್ಯವಸ್ಥೆ ನಿಯಂತ್ರಣಕ್ಕೆ ಎಐ ಬಳಕೆ ಹಿನ್ನಲೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹಾಗೂ ಸಂಚಾರ ಜಂಟಿ ಆಯುಕ್ತ ಎಂ.ಎನ್. ಅನುಚೇತ್ ಸುದ್ದಿಗೋಷ್ಠಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಎನ್. ಅನುಚೇತ್, ಯಾರಾದರೂ ಆಂಬ್ಯುಲೆನ್ಸ್ಗೆ ದಾರಿ ಬಿಟ್ಟಾಗ ದಂಡ ಬೀಳಲ್ಲ. ಒಂದು ವೇಳೆ ಫೈನ್ ಬಿದ್ದರೆ ಅದನ್ನು ಪ್ರಶ್ನೆ ಮಾಡಿ. ನಂತರ ನಾವು ಮನ್ನಾ ಮಾಡುತ್ತೇವೆ ಎಂದು ಹೇಳಿದ್ದಾರೆ.
ಎಐ ತಂತ್ರಜ್ಞಾನ ವೇಳೆ ಆ್ಯಂಬುಲೆನ್ಸ್ಗೆ ದಾರಿ ಬಿಡಲು ವಾಹನ ಸವಾರರ ಭಯ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಯಾವ ಆ್ಯಂಬುಲೆನ್ಸ್ಗೆ ಪ್ರಾಮುಖ್ಯತೆ ಕೊಡಬೇಕು ಎನ್ನುವುದನ್ನು ಮೊದಲು ತಿಳಿದುಕೊಳ್ಳಬೇಕು. ಖಾಸಗಿ ಆ್ಯಂಬುಲೆನ್ಸ್ ಚಾಲಕರನ್ನ ಕರೆಸಿ ಸಭೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.