#Exclusive NewsTop Newsಜಿಲ್ಲೆಫ್ರೀಡಂ ಟಿವಿ ವಿಶೇಷವಿಶೇಷಸುದ್ದಿ

ಸ್ಮಶಾನಕ್ಕೆ ಹೋಗಲು ರಸ್ತೆ ಸಂಪರ್ಕವಿಲ್ಲ ಶವ ಸಂಸ್ಕಾರಕ್ಕೂ ಪರದಾಡುವ ಸ್ಥಿತಿ:ಕೊಪ್ಪಳ

ಸ್ಮಶಾನಕ್ಕೆ ಹೋಗಲು ರಸ್ತೆ ಸಂಪರ್ಕವಿಲ್ಲದ  ಕಾರಣ ಭತ್ತದ ಗದ್ದೆಗಳಲ್ಲೇ ಶವ ಹೊತ್ತುಕೊಂಡು ಸಾಗಿರುವ ಘಟನೆ ಕೊಪ್ಪಳ  ಜಿಲ್ಲೆಯ ಗಂಗಾವತಿ ತಾಲೂಕಿನ ಹಳೆನಾಗನಹಳ್ಳಿಯಲ್ಲಿ ನಡೆದಿದೆ. ಯಾರಾದರೂ ಮೃತಪಟ್ಟರೆ ಅವರ ಅಂತ್ಯಸಂಸ್ಕಾರ ಮಾಡಲು ಇಲ್ಲಿನ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ಇದೆ. ಭತ್ತದ ಗದ್ದೆಯಲ್ಲಿಯೇ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಬೇಕಾದ ಪರಿಸ್ಥಿತಿ ಇದೆ.

ಇನ್ನು ಮತ್ತೊಂದೆಡೆ ಘಟನೆ ಸಂಬಂಧ ಗ್ರಾಮ ಪಂಚಾಯತ್ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು ಸ್ಮಶಾನಕ್ಕೆ ಇಲ್ಲಿಯವರಗೆ ರಸ್ತೆ ನಿರ್ಮಾಣವಾಗಿಲ್ಲ. ಸ್ಮಶಾನಕ್ಕೆ ಹೋಗಲು ಸರ್ಕಾರಿ ರಸ್ತೆ ಇಲ್ಲ. ಹೀಗಾಗಿ ರಸ್ತೆ ನಿರ್ಮಾಣ ಮಾಡಲು ಆಗ್ತಿಲ್ಲ. ಹೊಸದಾಗಿ ರಸ್ತೆ ನಿರ್ಮಾಣ ಮಾಡಬೇಕಾಗಿದೆ. ಅದಕ್ಕಾಗಿ ರೈತರಿಂದ ಭೂಮಿಯನ್ನು ಪಡೆದು ರಸ್ತೆಯನ್ನು ನಿರ್ಮಾಣ ಮಾಡಬೇಕಾಗಿದೆ. ಸರಿಸುಮಾರು ಮೂನ್ನೂರು ಮೀಟರ್ ರಸ್ತೆಗೆ ಭೂಮಿ ಸ್ವಾಧೀನ ಮಾಡಿಕೊಳ್ಳಬೇಕು.

 

Comments (0)

Your email address will not be published. Required fields are marked *

Back to top button