ಹುಬ್ಬಳ್ಳಿ: ಬೆಳಗಾವಿಯಲ್ಲಿ ನಡೆದ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಖಂಡಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಕನ್ನಡ ಪರ ಸಂಘಟನೆಗಳು ಕೊಟ್ಟಿರುವ ಬಂದ್ಗೆ ಬಹುತೇಕ ಸಂಘ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿವೆ.
ಹೀಗಾಗಿ, ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಬಸ್, ಆಟೋ ಸಂಚಾರ ಎಂದಿನಂತೆಯೇ ಇರಲಿದ್ದು, ಮಾರುಕಟ್ಟೆ, ಹೊಟೇಲ್‌ನಲ್ಲಿ ದೈನಂದಿನ ವ್ಯವಹಾರ ಚಟುವಟಿಕೆ ನಡೆಯಲಿದೆ. ಆಟೋ ಚಾಲಕರ ಸಂಘ, ಲಾರಿ ಓನರ್ಸ್ ಅಸೋಸಿಯೇಶನ್, ಕಟ್ಟಡ ಕಾರ್ಮಿಕರು, ಟಾಟಾ ಎಸಿ ಚಾಲಕರ ಹಾಗೂ ಮಾಲೀಕರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಬಲಿಸಿಲ್ಲ.
ಕೆಲ ಸಂಘಟನೆಗಳಿಂದ ಸಾಂಕೇತಿಕ ಬಂದ್
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಕೆಲವು ಸಂಘಟನೆಗಳು ಸಾಂಕೇತಿಕವಾಗಿ ಬಂದ್ ನಡೆಸುವುದಾಗಿ ತಿಳಿಸಿವೆ. ಮುಂಜಾಗ್ರತಾ ಕ್ರಮವಾಗಿ ಅಗತ್ಯ ಬಂದೋಬಸ್ತ್ ಮಾಡಿಕೊಂಡಿದ್ದೇವೆ ಡಿಸಿಪಿ ಮಹಾನಿಂಗ ನಂದಗಾವಿ ತಿಳಿಸಿದ್ದಾರೆ.