Top Newsಸುದ್ದಿ

ಪರೀಕ್ಷೆಯಲ್ಲಿ ಅಕ್ರಮಗಳಿಗೆ ಆಸ್ಪದವಿಲ್ಲ: ಕೃಷ್ಣ ಬೈರೇಗೌಡ ಎಚ್ಚರಿಕೆ

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ಡಿಸಿ, ಎಸ್‌ಪಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಎಚ್ಚರಿಸಿದ ಅವರು, ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿದೆ. ಪಿಎಸ್‌ಐ ಪರೀಕ್ಷೆಯಲ್ಲಿ ನಡೆದ ಅಕ್ರಮ ಇಡೀ ವ್ಯವಸ್ಥೆಯೇ ತಲೆತಗ್ಗಿಸುವಂತಹ ಕೃತ್ಯವಾಗಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆಯಲ್ಲಿ ಇಂತಹ ಯಾವ ಅಕ್ರಮಗಳಿಗೂ ಅಧಿಕಾರಿಗಳು ಅವಕಾಶ ನೀಡಬಾರದು ಎಂದು ತಾಕೀತು ಮಾಡಿದರು. ರಾಜ್ಯಾದ್ಯಂತ ಒಟ್ಟಾರೆ 4.71 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಹಿಂದೆ 3 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದೆ ದೊಡ್ಡ ಸಂಖ್ಯೆಯಾಗಿತ್ತು. ಆದರೆ, ಈ ವರ್ಷ ಕೆಲಸದ ಆಕಾಂಕ್ಷಿ ಯುವಕರ ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗಿದ್ದು, ನ್ಯಾಯಯುತವಾಗಿ ಪರೀಕ್ಷೆ ನಡೆಸಬೇಕಾದ ಹಾಗೂ ಅರ್ಹರಿಗೆ ಕೆಲಸ ಲಭ್ಯವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕೆಲವು ಜಿಲ್ಲೆಗಳಲ್ಲಿ ಕನಿಷ್ಠ 40 ಕೇಂದ್ರಗಳಲ್ಲಿ ಪರೀಕ್ಷೆ ನಡೆದರೆ, ಕೆಲವು ಜಿಲ್ಲೆಗಳಲ್ಲಿ ಗರಿಷ್ಠ 86 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕಿದೆ ಎಂದು ಸೂಚನೆ ನೀಡಿದರು.

Comments (0)

Your email address will not be published. Required fields are marked *

Back to top button