Wednesday, November 19, 2025
21.1 C
Bengaluru
Google search engine
LIVE
ಮನೆ#Exclusive NewsTop Newsಈ ಬಾರಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ; ಶಾಸಕ ಡಾ. ಅಜಯ್​ ಸಿಂಗ್​

ಈ ಬಾರಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ; ಶಾಸಕ ಡಾ. ಅಜಯ್​ ಸಿಂಗ್​

ಕಲಬುರಗಿ: ಮುಂಬರುವ ಅಕ್ಟೋಬರ್​ನಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆಯಿದ್ದು, ಈ ವೇಳೆ ನನಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್​ ಶಾಸಕ ಡಾ. ಅಜಯ್​ ಸಿಂಗ್​ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ವಿರೊಧಿ ಚಟುವಟಿಕೆಯಲ್ಲಿ ಭಾಗಿಯಾದವನಲ್ಲ. ನಮ್ಮ ತಂದೆ ಕಾಲದಿಂದಲೂ ಶಾಂತವಾಗಿದ್ದೇವೆ. ನಮ್ಮ ತಂದೆಯಯವರಿಗೆ ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ಕೊಡು ಅಂದಾಗ ಮರು‌ಮಾತನಾಡದೇ ಕೊಟ್ಟಿದ್ದರು. ಇಲ್ಲಿಯವರೆಗೂ ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ. ಒಟ್ಟಾರೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ರು.

ಸಿಎಂ ಬದಲಾವಣೆ ವಿಚಾರದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇನ್ನು ಈ ಬಗ್ಗೆ ಪಕ್ಷದ ಹೈಕಮಾಂಡ್​ ಮಟ್ಟದಲ್ಲಿ ಚರ್ಚೆ ಆಗುತ್ತದೆ. ಇನ್ನು ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ಧಾರೆ. ನಾನು ಸುರ್ಜೇವಾಲ ಅವರಿಗೆ ಯಾವುದೇ ವಿಷಯದ ಬಗ್ಗೆ ದೂರು ನೀಡಿಲ್ಲ. ಕ್ಷೇತ್ರದ ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆಯ ಕುರಿತಾಗಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ ಎಂದಿದ್ಧಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments