Freedom TV

ಈ ವಾರ ತೆರೆಗೆ ಅಜೇಯ್ ರಾವ್ ಅಭಿನಯದ ಸುಂದರ ಕೌಟುಂಬಿಕ ಕಥಾನಕ “ಸರಳ ಸುಬ್ಬರಾವ್” .

1971 ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಹಾಗೂ ಖ್ಯಾತ ಲೇಖಕಿ ತ್ರಿವೇಣಿ ಅವರ ಕಾದಂಬರಿ ಆಧರಿಸಿರುವ ಚಿತ್ರ “ಸರಳ ಸುಬ್ಬರಾವ್”. ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ, ಹಲವು ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ “ಸರಳ ಸುಬ್ಬರಾವ್” ಚಿತ್ರ ಈ ವಾರ ಫೆಬ್ರವರಿ 20 ರಂದು ತೆರೆಗೆ ಬರುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಪ್ರದೀಪ್ ಪದ್ಮಕುಮಾರ್ ಅವರ ಛಾಯಾಗ್ರಹಣವಿದೆ. ಬಸವರಾಜ ಅರಸ್ ಸಂಕಲನ,‌ ಅಮರ್ ಕಲಾ ನಿರ್ದೇಶನ ಹಾಗೂ ಮದನ್ – ಹರಿಣಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಅಜೇಯ್ ರಾವ್, ಮಿಶಾ ನಾರಂಗ್, ರಂಗಾಯಣ ರಘು, ನಟ ಶ್ರೀ, ಚಿತ್ಕಲಾ ಬಿರಾದಾರ್, ವಿಜಯ್ ಚಂಡೂರ್, ರಘು ರಾಮನಕೊಪ್ಪ ಮುಂತಾದವರು “ಸರಳ ಸುಬ್ಬರಾವ್” ಚಿತ್ರದಲ್ಲಿ ಅಭಿನಯಿಸಿದ್ದಾರೆ.

Comments (0)

Your email address will not be published. Required fields are marked *

Back to top button