Thursday, May 1, 2025
25.2 C
Bengaluru
LIVE
ಮನೆ#Exclusive NewsTop Newsಸ್ವರ್ಗಕ್ಕೆ ಹೋಗಲು ಭಯಸುವರು ಸಂಸ್ಕೃತ ಕಲಿಯಬೇಕು-ಸುಗುಣೇಂದ್ರ ತೀರ್ಥ ಸ್ವಾಮೀಜಿ

ಸ್ವರ್ಗಕ್ಕೆ ಹೋಗಲು ಭಯಸುವರು ಸಂಸ್ಕೃತ ಕಲಿಯಬೇಕು-ಸುಗುಣೇಂದ್ರ ತೀರ್ಥ ಸ್ವಾಮೀಜಿ

ಉಡುಪಿ: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸ್ವರ್ಗಕ್ಕೆ ಹೋಗಬಯಸುವ ಎಲ್ಲರೂ ಸಂಸ್ಕೃತ ಭಾಷೆ ಕಲಿಯಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ವತಿಯಿಂದ ರಾಜಾಂಗಣದಲ್ಲಿ ನಡೆದ ಶ್ರೀ ಕೃಷ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಸ್ವಾಮೀಜಿ ಮಾತನಾಡಿ, ಸಂಸ್ಕೃತ ಪವಿತ್ರ ಪಾವನ ಶ್ರೇಷ್ಠವಾಗಿರುವ ಭಾಷೆ ಎಂದು ಹೇಳಿದ್ದಾರೆ. ಸಂಸ್ಕೃತ ಸರಳ, ಸುಂದರ ಮತ್ತು ಸುಲಭವಾದ ಭಾಷೆಯಾಗಿದ್ದು, ಇದು ವಿಶ್ವಭಾಷೆ, ದೇವಭಾಷೆಯಾಗಿದೆ. ಎಲ್ಲಾ ಭಾಷೆಗಳ ಮೂಲ ಮತ್ತು ಜನನಿ ಸಂಸ್ಕೃತವಾಗಿದೆ. ಇದು ಕೇವಲ ಭಾರತೀಯ ಭಾಷೆಗಳ ಮೂಲವಲ್ಲದೇ ಆಂಗ್ಲಭಾಷೆಯ ಮೂಲವೂ ಆಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇರಳ ರಾಜ್ಯಪಾಲ ಆರಿಫ್ ಖಾನ್ ಮಾತನಾಡಿ, ದೇವರಿಗೆ ಯಾವ ಭಾಷೆಯಲ್ಲಿ ಪ್ರಾರ್ಥಿಸುತ್ತೇವೆ ಎನ್ನುವುದಕ್ಕಿಂತ ಯಾವ ಭಾವದಲ್ಲಿ ಪ್ರಾರ್ಥಿಸುತ್ತೇವೆ ಎನ್ನುವದು ಮುಖ್ಯ ಎಂದು ಹೇಳಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments