ಮೈಸೂರು: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ..
ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಯಾವ ಯಾವ ನಂಬರ್ ಗಳಿಂದ ಬೆದರಿಕೆ ಬಂದಿದೆ ಎಂಬುದನ್ನು ಪತ್ತೆ ಹಚ್ಚುತ್ತಿದ್ದೇವೆ. ಬೆದರಿಕೆ ಹಾಕಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು. ಬೆದರಿಕೆ ಹಾಕುವವರ ಮೇಲೆ ಕ್ರಮ ಕೈಗೊಳ್ಳದ ಹೊರತು ಇಂತಹ ಪ್ರಕರಣಗಳು ನಿಲ್ಲುವುದಿಲ್ಲ. ಆರ್ ಎಸ್ ಎಸ್ ಶಾಖೆಗಳ ಬ್ಯಾನ್ ವಿಚಾರವನ್ನು ಪ್ರಿಯಾಂಕ್ ಖರ್ಗೆ ತಮ್ಮ ಪತ್ರದ ಮೂಲಕ ಅಭಿಪ್ರಾಯವನ್ನು ಹೇಳಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಾನು ಆ ಬಗ್ಗೆ ನಿರ್ಧಾರಗಳನ್ನು ಹೇಳಲು ಸಾಧ್ಯವಿಲ್ಲ. ಸಿಎಂ ಆ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಒಂದೆರೆಡು ರಸ್ತೆಗಳು ಗುಂಡಿ ಬಿದ್ದದ್ದನ್ನ ಇಟ್ಟುಕೊಂಡು ಇಮೇಜ್ ಕೆಡಿಸುವ ರಾಜಕಾರಣ ಮಾಡಬೇಡಿ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ.ನಾನು ಯಾರುಯಾರು ಎಂದು ಬಾಯಿ ಬಿಟ್ಟು ಹೇಳುತ್ತಿಲ್ಲ ಅಷ್ಟೇ. ಮಳೆಯಿಂದ ರಸ್ತೆಗಳು ಹಾಳಾಗಿರುವುದು ಸತ್ಯ.ರಸ್ತೆಗಳ ರಿಪೇರಿ ಕಾರ್ಯ ನಡೆಯುತ್ತಿದೆ. ಇದನ್ನೇ ಇಟ್ಟುಕೊಂಡು ಟ್ವಿಟ್ ಗಳನ್ನ ಮಾಡಬೇಡಿ. ಯಾರು ಏನೇ ಮಾಡಿದರು ಬ್ರಾಂಡ್ ಬೆಂಗಳೂರಿನ ಇಮೇಜ್ ಕೆಡಿಸಲು ಸಾಧ್ಯವಿಲ್ಲ ಎಂದರು.
ಗೂಗಲ್ ಕಂಪನಿ ಆಂಧ್ರ ಕ್ಕೆ ಹೋಗಲು ಅವರದ್ದೇ ಆದ ಕಾರಣಗಳು ಇವೆ. ಇದೇ ಕಾರಣಗಳಿಗೆ ಅವರು ಹೋಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ.ನಾವು ಎಲ್ಲಾ ಮೂಲ ಭೂತ ಸೌಕರ್ಯಗಳನ್ನ ಕಲ್ಪಿಸುವ ಕೆಲಸ ಮಾಡುತ್ತಿದ್ದೇವೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಅಷ್ಟೇ. ಎಲ್ಲರನ್ನು ಕರೆದು ಮಾತನಾಡಿಸುತ್ತೇವೆ. ಎಲ್ಲವನ್ನೂ ಸರಿಪಡಿಸುತ್ತೇವೆ ಎಂದರು.


