ಬೆಂಗಳೂರಿನಲ್ಲಿ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿರುವ ಪ್ರಕರಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ಧಾರೆ.. ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿ, 5.76 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಸಿಎಂಎಸ್ ವಾಹನ ನಿರ್ವಹಣೆ ಮಾಡುತ್ತಿದ್ದ ನೌಕರ, ಪೊಲೀಸ್ ಕಾನ್‌ಸ್ಟೆಬಲ್ ಮತ್ತು ಸಿಎಂಎಸ್ ಕಂಪನಿ ಮಾಜಿ ನೌಕರ ಬಂಧಿತ ಆರೋಪಿಗಳು. 54 ಗಂಟೆಯಲ್ಲಿ ಪ್ರಕರಣವನ್ನು ಭೇದಿಸಲಾಗಿದೆ. 200 ಮಂದಿ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಆರೋಪಿಗಳು ಮೂರು ತಿಂಗಳಿಂದ ಸಂಚು ನಡೆಸಿದ್ದರು. 15 ದಿನಗಳಿಂದ ಆ ಪ್ರದೇಶದಲ್ಲಿ ಓಡಾಟ ನಡೆಸಿದ್ದರು ಎಂದು ತಿಳಿದು ಬಂದಿದೆ. ತನಿಖಾ ತಂಡ ಹಾಗೂ ಸಿಬ್ಬಂದಿಗೆ ₹5 ಲಕ್ಷ ನಗದು ಬಹುಮಾನ ನೀಡುವುದಾಗಿ ನಗರ ಪೊಲೀಸ್ ಕಮಿಷವರ್ ಸೀಮಾಂತ್ ಕುಮಾರ್ ಸಿಂಗ್ ಘೋಷಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಐವರು ಭಾಗಿಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. 5 ರಾಜ್ಯದಲ್ಲಿ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.


