Wednesday, August 20, 2025
20.6 C
Bengaluru
Google search engine
LIVE
ಮನೆ#Exclusive NewsTop Newsದರ್ಶನ್ ಆ್ಯಂಡ್ ಗ್ಯಾಂಗ್‌ಗೆ ಜೈಲೇ ಗತಿ – 3 ದಿನ ನ್ಯಾಯಾಂಗ ಬಂಧನ ವಿಸ್ತರಣೆ

ದರ್ಶನ್ ಆ್ಯಂಡ್ ಗ್ಯಾಂಗ್‌ಗೆ ಜೈಲೇ ಗತಿ – 3 ದಿನ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಮಧ್ಯಾಹ್ನ 1:15ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ 17 ಆರೋಪಿಗಳು ಕೂಡ ವಿಚಾರಣೆ ಹಾಜರಾಗಿದ್ದರು. ಬಳ್ಳಾರಿ ಜೈಲಿನಿಂದ ವೀಡಿಯೋ ಕಾನ್ಫರೆನ್ಸ್‌ಗೆ ಆರೋಪಿ ದರ್ಶನ್ ಬಂದಿದ್ದರು.

ಪ್ರಕರಣದ ಹಾರ್ಡ್ಡಿಸ್ಕ್, ಪೆನ್‌ಡ್ರೈವ್ ಎಲ್ಲವನ್ನೂ ಕೋರ್ಟ್‌ಗೆ ಎಸ್‌ಪಿಸಿ ಪ್ರಸನ್ನಕುಮಾರ್ ಸಲ್ಲಿಕೆ ಮಾಡಿದರು. ಡಿಜಿಟಲ್ ಎವಿಡೆನ್ಸ್ 2 ವಾರದಲ್ಲಿ ಕೊಡುವುದಾಗಿ ತಿಳಿಸಿದರು. ವಿಚಾರಣೆ ವೇಳೆ, ಜೈಲಿಗೆ ಚಾರ್ಜ್‌ಶೀಟ್‌ ಕಳಿಸುತ್ತೇವೆ ಎಂದು ಎಸ್‌ಪಿಸಿ ಪ್ರಸನ್ನಕುಮಾರ್ ಕೋರ್ಟ್‌ಗೆ ಮನವಿ ಮಾಡಿದರು. ಆದರೆ ಆರೋಪಿಗಳ ಪರ ವಕೀಲರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮತ್ತೆ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿತು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments