ರಾಜ್ಯಸುದ್ದಿ

ಕನಕಪುರದಲ್ಲಿ ಗ್ಯಾಸ್​ ಲೀಕ್​ ಆಗಿ ಮೂವರು ಸಾವು

ರಾಮನಗರ: ಜನವರಿ 26 ರಂದು ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕನಕಪುರದ ಅಮರನಾರಾಯಣ ಬ್ಲಾಕ್‌ನಲ್ಲಿ ದುರಂತ ಸಂಭವಿಸಿದೆ.

ಕಳೆದ ಜನವರಿ 26ರಂದು ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಈ ಘಟನೆಯಲ್ಲಿ ಸಿದ್ದರಾಜು (55), ಅವರ ಪತ್ನಿ ಚಂದ್ರಮ್ಮ (50) ಹಾಗೂ ಪುತ್ರ ಪ್ರಶಾಂತ್ (22) ತೀವ್ರವಾಗಿ ಸುಟ್ಟಗಾಯಗಳಿಗೆ ಒಳಗಾಗಿದ್ದರು. ಗಾಯಾಳುಗಳನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ಧಾರೆ.. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button