Monday, June 23, 2025
25.9 C
Bengaluru
Google search engine
LIVE
ಮನೆ#Exclusive NewsTop Newsವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರೇಪ್

ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರೇಪ್

ಚೆನೈ: 13 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅಮಾನವೀಕವಾಗಿ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು  ಬಂಧಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.

ಚಿನ್ನಸ್ವಾಮಿ, ಆರುಮುಗಂ ಹಾಗೂ ಪ್ರಕಾಶ್ ಬಂಧಿತ ಶಿಕ್ಷಕರಾಗಿದ್ದಾರೆ. ಕೆಲ ದಿನಗಳಿಂದ ವಿದ್ಯಾರ್ಥಿನಿ ಶಾಲೆಗೆ ಬಾರದೇ ಇರುವುದನ್ನು ಗಮನಿಸಿದ ಮುಖ್ಯಶಿಕ್ಷಕಿ ಆಕೆ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಸಂತ್ರಸ್ತೆಯ ಪೋಷಕರು, ಆಕೆ ಮೇಲೆ ಶಾಲೆಯಲ್ಲಿ ಮೂವರು ಶಿಕ್ಷಕರು ಅತ್ಯಾಚಾರದ ಕೃತ್ಯ ಎಸಗಿರುವ ಬಗ್ಗೆ ತಿಳಿಸಿದ್ರು.

ವಿಷಯ ತಿಳಿದ ಮುಖ್ಯ ಶಿಕ್ಷಕಿ ಜಿಲ್ಲಾ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದಾರೆ. ದೂರಿನನ್ವಯ ಅಧಿಕಾರಿಗಳು ಸಂತ್ರಸ್ತ ಬಾಲಕಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿ ಬಳಿಕ ಕೃಷ್ಣಗಿರಿ ಜಿಲ್ಲೆಯ ಬಾರ್ಕೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಕಾಮುಕ ಮೂವರು ಶಿಕ್ಷಕರನ್ನ ಬಂಧಿಸಿದ್ದಾರೆ.

ಬಳಿಕ ವಿಷಯದ ತಿಳಿದ ಇನ್ನುಳಿದ ಇಬ್ಬರು ಶಿಕ್ಷಕರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆಯನ್ನು ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್ ದಿನೇಶ್ ಕುಮಾರ್ ತಿಳಿಸಿದ್ದಾರೆ. ಇತ್ತ ಪ್ರಕರಣ ದಾಖಲಿಸುತ್ತಿದ್ದಂತೆ ಕೃಷ್ಣಗಿರಿ ಜಿಲ್ಲಾ ಪ್ರಧಾನ ಶಿಕ್ಷಣಾಧಿಕಾರಿಗಳು ಮೂವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments