Sunday, March 1, 2026
20.8 C
Bengaluru
Google search engine
LIVE
ಮನೆ#Exclusive NewsTop Newsಟ್ರಕ್-ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ

ಟ್ರಕ್-ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ

ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಟ್ರಕ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗಂಜ್ ವೃತ್ತದ ಕಡೆಯಿಂದ ವೇಗವಾಗಿ ಬಂದ ಟ್ರಕ್, ಬೈಕ್‌ಗೆ ನೇರವಾಗಿಯೇ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ.

ಮೃತರನ್ನು ನಗರದ ಸುಖಾಣಿ ಕಾಲೋನಿಯ ನಿವಾಸಿಗಳಾದ ಮೊಹಮದ್ ಅಲಿ ಪಾಶಾ, ನೂರ ಮೊಹಮದ್ ಮತ್ತು ಫಯಾಜ್ ಎಂದು ಗುರುತಿಸಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

ಮುಂಜಾನೆಯ ನೀರವ ಮೌನದಲ್ಲಿ ಸಂಭವಿಸಿದ ಈ ದುರಂತವು ಸುಖಾಣಿ ಕಾಲೋನಿಯಲ್ಲಿ ಮೌನ ಮತ್ತು ಶೋಕ ಮಡುಗಟ್ಟುವಂತೆ ಮಾಡಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟ್ರಕ್ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments