ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆದಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಹಿರಿಯ ಐಪಿಎಸ್ ಅಧಿಕಾರಿಗಳನ್ನ ಸರ್ಕಾರ ವರ್ಗಾವಣೆ ಮಾಡಿದೆ. ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಹಿರಿಯ ಐಪಿಎಸ್ ಅಧಿಕಾರಿ ಎನ್. ಸತೀಶ್ ಕುಮಾರ್ ಅವರನ್ನ ಹೆಚ್ಚುವರಿ ಆಯುಕ್ತರಾಗಿ, ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.ಆರ್. ರವಿಕಾಂತೇಗೌಡ ಅವರನ್ನ ಐಜಿಪಿ ದಾವಣಗೆರೆ ಪೂರ್ವ ವಲಯ ಹಾಗೂ ಬಿ. ರಮೇಶ್ ಅವರನ್ನ ಡಿಐಜಿಪಿ & ಜಂಟಿ ಪೊಲೀಸ್ ಆಯುಕ್ತರಾಗಿ ಬೆಂಗಳೂರು ಪೂರ್ವ ವಲಯಕ್ಕೆ ಟ್ರಾನ್ಸ್ ಫರ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೂವರು ಹಿರಿಯ ಐಪಿಎಸ್ ಅಧಿಕಾರಿಗಳು ಟ್ರಾನ್ಸ್ಫರ್..!
RELATED ARTICLES