ಕ್ರೈಂ ಸ್ಟೋರಿ
ಈದ್ ಮಿಲಾದ್‌ಗೆ 40 ಅಡಿ ಟಿಪ್ಪು ಕಟೌಟ್ – ಪಾಕಿಸ್ತಾನಿ ಹಾಡು ಬಳಕೆ – FIR ದಾಖಲು!
40ft Tippu Cutout For Eid Milad - Use Of Pakistani Song - File FIR!

ಚಿಕ್ಕಮಗಳೂರು : ಈದ್ ಮಿಲಾದ್ ಮೆರವಣಿಗೆಗೆ ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಬೃಹತ್ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದೆ. ಈ ಟಿಪ್ಪು ಸುಲ್ತಾನ್ ಕಟೌಟ್‌ನ ವಿಡಿಯೋಗೆ ಪಾಕಿಸ್ತಾನಿ ಮುಜಾಹಿದ್‌ಗೆ ಸಂಬಂಧಿಸಿದ ಹಾಡನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಿ ಹರಿಬಿಡಲಾಗಿದೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೃತ್ಯದ ವಿರುದ್ಧ ಸ್ಥಳೀಯ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ತಪ್ಪಿತಸ್ಥರ ವಿರುದ್ಧ ತಕ್ಷಣವೇ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ.
ವಿಡಿಯೋ ವೈರಲ್ ಆಗಿ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಈ ಕುರಿತು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




