ರಾಯಚೂರು : ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದಡಿಯಲ್ಲಿ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ.
ಸಿರವಾರ ಪಟ್ಟಣದ ಮಾರ್ಕೆಟ್ ಬಳಿಯ ಟಿಪ್ಪು ಸರ್ಕಲ್‌ನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರಿ ಚಪ್ಪಲಿ ಹಾರ ಹಾಕಿದ್ದರು. ಈ ಘಟನೆಯ ಬಳಿಕ ಅಲ್ಲಿದ್ದ ಮುಸ್ಲಿಂ ಮುಖಂಡರು ತೀವ್ರ ಆಕ್ರೋಶ ಹೊರಹಾಕಿ , ಪುಂಡರನ್ನು ಬಂಧಿಸುವಂತೆ ರಸ್ತೆ ತಡೆದು , ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು.
ಪ್ರಕರಣದ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿ ಆಕಾಶ್ (23) ತಪ್ಪೊಪ್ಪಿಕೊಂಡಿದ್ದನು. ಆದರೆ ಘಟನೆಯಲ್ಲಿ ಸಿರವಾರ ಠಾಣೆಯ ಕಾನ್ಸ್‌ಟೇಬಲ್‌ಗಳಾದ ಇಸ್ಮಾಯಿಲ್ ಹಾಗೂ ರೇವಣಸಿದ್ದ ಅವರು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕರ್ತವ್ಯಲೋಪ ಎಸಗಿದ್ದಾರೆ ಎಂದು ರಾಯಚೂರು ಎಸ್‌ಪಿ ಬಿ.ನಿಖಿಲ್ ಆದೇಶ ಅಮಾನತು ಮಾಡಿ ಹೊರಡಿಸಿದ್ದಾರೆ.