Top Newsಜನಸಾಮಾನ್ಯರ ದನಿರಾಜ್ಯ

ಐಕ್ಯತಾ ಸಮಾವೇಶ ಯಶಸ್ವಿಗೆ ಸಚಿವ ಡಾ. ಎಚ್. ಸಿ ಮಹದೇವಪ್ಪ ಸಭೆ

ಭಾರತದ ಸಂವಿಧಾನಕ್ಕೆ ಅಮೃತ ಮಹೋತ್ಸವ ಹಿನ್ನೆಲೆ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶಕ್ಕೆ ಸಂಬಂಧಿಸಿದಂತೆ ಎಲ್ಲಾ ಮುಖಂಡರೊಂದಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಎಚ್ ಸಿ ಮಹದೇವಪ್ಪ ಸಭೆ ನಡೆಸಿ ಸಲಹೆಗಳನ್ನು ಪಡೆದರು.

ಫೆಬ್ರವರಿ 24 ಮತ್ತು 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಈ ಐತಿಹಾಸಿಕ ಕಾರ್ಯಕ್ರಮ ಯಾವುದೇ ಕಾರಣಕ್ಕೂ ಲೋಪಗಳು ಬರಬಾರದು ಅನ್ನುವ ಲೆಕ್ಕಾಚಾರದಲ್ಲಿ ಸಚಿವ ಡಾ. ಎಚ್ ಸಿ ಮಹದೇವಪ್ಪ ಎಲ್ಲಾ ಸಮುದಾಯದ ಮುಖಂಡರೊಂದಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಘಟನೆಗಳ ಮುಖಂಡರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮಗದ ರೂಪುರೇಷೆ ಬಗ್ಗೆ ಸಲಹೆ ಸೂಚನೆಗಳನ್ನು ಪಡೆದುಕೊಂಡರು.

2024 ಜನವರಿ 26ಕ್ಕೆ ಭಾರತ ಸಂವಿಧಾನವನ್ನ ಅಂಗೀಕರಿಸಿ ಜಾರಿಗೆ ತಂದು 75 ವರ್ಷಗಳು ತುಂಬಿದ ಶುಭ ಗಳಿಗೆಯಲ್ಲಿ ಅಮೃತ ಮಹೋತ್ಸವ ಅಮೃತ ಮಹೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಡಾ. ಎಚ್ ಸಿ ಮಹದೇವಪ್ಪ ಸಲಹೆ ಸೂಚನೆಗಳನ್ನು ಪಡೆದು ಸಂವಿಧಾನ ರಚನಾ ಸಭೆಯ ಸದಸ್ಯರ ಅವಿರತ ಪ್ರಯತ್ನಕ್ಕೆ ಐಕ್ಯತಾ ಸಮಾವೇಶದ ಮೂಲಕ ಗೌರವ ಸಮರ್ಪಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿರೋದು ಶ್ಲಾಘನೀಯ.

Comments (0)

Your email address will not be published. Required fields are marked *

Back to top button