ರಾಜಕೀಯ

ನಾಳೆ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ!

The funeral of Deve Gowda's wife, Chennamma, will take place tomorrow!

ಹಾಸನ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರು ನಿನ್ನೆ ಸಂಜೆ ವಿಧಿವಶರಾಗಿದ್ದಾರೆ. ಅವರ ಅಂತ್ಯಸಂಸ್ಕಾರ ನಾಳೆ (ಸೋಮವಾರ) ಸಂಜೆ ಹಾಸನ ಜಿಲ್ಲೆಯ ಹೊಳನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನೆರವೇರಲಿದೆ.

ಅಂತಿಮ ದರ್ಶನಕ್ಕೆ ನಾಳೆ ಬೆಳಿಗ್ಗೆಯಿಂದಲೇ ಹಾಸನ ಜಿಲ್ಲೆಯ ಹೊಳನರಸೀಪುರದಲ್ಲಿರುವ ಹೆಚ್.ಡಿ. ರೇವಣ್ಣ ಅವರ ನಿವಾಸದಲ್ಲಿ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಸಾರ್ವಜನಿಕರ ದರ್ಶನದ ಬಳಿಕ ನಾಳೆ ಸಂಜೆ 4 ಗಂಟೆಗೆ ಚೆನ್ನಮ್ಮ ಅವರ ಅಂತ್ಯಸಂಸ್ಕಾರ ಪ್ರಕ್ರಿಯೆಗಳು ಆರಂಭವಾಗಲಿವೆ.

ಹೊಳನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿರುವ ದೇವೇಗೌಡರ ಕುಟುಂಬಕ್ಕೆ ಸೇರಿದ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಭೂಮಿಯಲ್ಲಿ ಸಮಾಧಿ ನಿರ್ಮಾಣಕ್ಕೆ ಈಗಾಗಲೇ ಜಾಗವನ್ನು ಗುರುತಿಸಿ, ಸಿದ್ಧತೆ ಮಾಡಲಾಗಿದೆ.

ಒಕ್ಕಲಿಗ ಸಮುದಾಯದ ಪ್ರಕಾರ ಅಂತ್ಯಸಂಸ್ಕಾರ ನೆರವೇರಲಿದೆ. ದೇವೇಗೌಡರ ಕುಟುಂಬದ ಆಪ್ತರು, ರಾಜಕೀಯ ಮುಖಂಡರು ಹಾಗೂ ಮಠಾಧೀಶರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Comments (0)

Your email address will not be published. Required fields are marked *

Back to top button