ಬಂಗಾಳ ಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರೀತ್ಯಕ್ಕೆ ಮಳೆಯ ಆರ್ಭಟ ಜೋರಾಗಿದೆ. ರಾಜ್ಯದ ಹಲವೆಡೆ ಇಂದು ಬೆಳಗ್ಗೆಯಿಂದ ಒಂದೇ ಸಮನೆ ಮಳೆಯಾಗುತ್ತಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ನಿರಂತರ ಸುರಿದ ಮಳೆಗೆ ಸಿಲಿಕಾನ್ ಸಿಟಿಯ ಹಲವೆಡೆ ಅನಾಹುತಗಳು ಸಂಭವಿಸಿದೆ.
ಬೆಂಗಳೂರು ನಗರದಲ್ಲಿ ಇಂದು ಮಾತ್ರವಲ್ಲ ಮುಂದಿನ 72 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಹತ್ವದ ಮುನ್ಸೂಚನೆ ನೀಡಿದೆ.ಆದ ಕಾರಣ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20ರವರೆಗೆ ದಸರಾ ರಜೆ ಇದೆ. ಆದರೆ ನಗರದ ಖಾಸಗಿ ಶಾಲೆಗಳು ಕಳೆದ ಸೋಮವಾರದಿಂದಲೇ ಆರಂಭ ಮಾಡಿವೆ. ನಗರದಲ್ಲಿ ಇಂದು ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳಿಗೆ ಶಾಲೆಗೆ ಬರಲು ಕಷ್ಟ ಎದುರಾಗಿದೆ. ಹೀಗಾಗಿ ರಾಜಧಾನಿಯ ಶಾಲೆಗಳಿಗೆ ರಜೆ ನೀಡಲು ಬೆಂಗಳೂರು ನಗರ ಡಿಸಿ ಜಗದೀಶ್ ಅವರು ಸೂಚನೆ ನೀಡಿದ್ದಾರೆ. ನಾಳೆ ಬೆಂಗಳೂರು ವ್ಯಾಪ್ತಿಯ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಿ ಬೆಂಗಳೂರು ಜಿಲ್ಲಾಡಳಿತ ಆದೇಶ ನೀಡಿದೆ.