Wednesday, February 11, 2026
15.6 C
Bengaluru
Google search engine
LIVE
ಮನೆಜಿಲ್ಲೆವಿಜಯನಗರದಲ್ಲಿ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಪಲ್ಟಿ;ಕೇರಳದ ವಿದ್ಯಾರ್ಥಿಗಳಿಗೆ ಅಪಘಾತ

ವಿಜಯನಗರದಲ್ಲಿ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಪಲ್ಟಿ;ಕೇರಳದ ವಿದ್ಯಾರ್ಥಿಗಳಿಗೆ ಅಪಘಾತ

ವಿಜಯನಗರ: ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ಕೇರಳದಿಂದ ಹಂಪಿಗೆ ಪ್ರವಾಸಕ್ಕೆಂದು ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಮಿನಿ ಬಸ್ ಆಕಸ್ಮಿಕವಾಗಿ ಪಲ್ಟಿಯಾಗಿದೆ.

ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ ರಸ್ತೆಯ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದ್ದು, ಈ ಅಪಘಾತದ ರಭಸಕ್ಕೆ ಬಸ್ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಹಾಗೂ ಒಬ್ಬ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ಸಂಗತಿಯಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಕೂಡ್ಲಿಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments