ಹೆಚ್ಡಿ ಕುಮಾರಸ್ವಾಮಿ ಅವರೇ ಟೌನ್ ಶಿಪ್ ಪಿತಾಮಹ . ಈಗ ಅವರ ಕುಟುಂಬದವ್ರೆ ವಿರೋಧ ಮಾಡಿದರೆ ಯಾವ ನ್ಯಾಯ..? ಎಂದು ಮಾಜಿ ಯಾರ್ ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು ಮಾಡುವುದು ಖಚಿತ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಹೇಳಿದ್ದಾರೆ.
ಬಿಡದಿ ಟೌನ್ ಶಿಪ್ಗೆ ರೈತರ ಭೂಮಿ ಕೈ ಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೇವೇಗೌಡ ಅವರು ಪತ್ರ ಬರೆದಿರುವ ಕುರಿತು ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅಧಿಕಾರಾವಧಿಯಲ್ಲೇ 7 ಟೌನ್ ಶಿಪ್ ಮಾಡಬೇಕು ಎಂದು ತೀರ್ಮಾನವಾಗಿತ್ತು. ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ದರು. ಟೌನ್ ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು. ನಾನು ಡಿನೋಟಿಫಿಕೇಷನ್ ಮಾಡಲು ಹೋಗುವುದಿಲ್ಲ ಎಂದು ಹೇಳಿದರು.
ಎರಡು ಬಾರಿ ಕುಮಾರಸ್ವಾಮಿ ಸಿಎಂ ಆದರೂ ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ. ಇದೆಲ್ಲ ನಿಮ್ಮ ಮಗನೆ ಮಾಡಿದ್ದು. ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಹೆಚ್ ಡಿ ದೇವೇಗೌಡ ಅವರಿಗೆ ತಿರುಗೇಟು ನೀಡಿದರು.