Top Newsರಾಜ್ಯಸುದ್ದಿ

ಬೆಂಗಳೂರಿನಲ್ಲಿ ದುರಂತ : ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಕಾರ್ಮಿರು ಬಲಿ

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿ ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡದಲ್ಲಿ ಶುಕ್ರಮಾರ ಅಗ್ನಿ ಅವಗಡ ಸಂಭವಿಸಿ, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತ ಕಾರ್ಮಿಕರನ್ನು ಉತ್ತರ ಪ್ರದೇಶ ಮೂಲದ ಉದಯ್ ಬಾನು (40) ಹಾಗೂ ಬಿಹಾರ ಮೂಲದ ರೋಶನ್ (23) ಎಂದು ಗುರುತಿಸಲಾಗಿದೆ.

ಸತೀಶ್ ಎನ್ನುವವರಿಗೆ ಸೇರಿದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಿರ್ಮಾಣ ಹಂತದಲ್ಲಿದ್ದ ಬಿಲ್ಡಿಂಗ್‌ನಲ್ಲಿ ವುಡ್ ವರ್ಕ್ಸ್ ಮಾಡಲಾಗಿತ್ತು. ಈ ವೇಳೆ ಕೆಲಸಗಾರರ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಬಿದ್ದು, ಧಗಧಗನೆ ಹೊತ್ತಿ ಉರಿದ ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿದೆ.

ಕಟ್ಟಡದಲ್ಲಿ ಒಟ್ಟು ಆರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನುಳಿದ ಇಬ್ಬರು ಕಾರ್ಮಿಕರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದು, ಸದ್ಯ ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button