ರಾಜ್ಯ

ಸ್ಕೂಲ್​ ವ್ಯಾನ್​ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವು!

Train hits school van – three dead, including two students!

ಕೊಲ್ಕತ್ತಾ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾಥಿಗಳು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಶಾಲಾ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುರ್ಷಿದಾಬಾದ್‌ನ ಬೆಹ್ರಾಂಪುರ ಪ್ರದೇಶದ ಕರ್ಣಸುಬರ್ಣ ರೈಲ್ವೆ ಕ್ರಾಸಿಂಗ್ ಬಳಿ ಬೆಳಗ್ಗೆ ಸುಮಾರು 7 ಗಂಟೆಗೆ ಈ ಘಟನೆ ಸಂಭವಿಸಿದೆ. ಮಕ್ಕಳು ಎಂದಿನಂತೆ ಶಾಲೆಗೆ ಹೊರಟಿದ್ದ ಸಮಯದಲ್ಲಿ, ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ವ್ಯಾನ್‌ಗೆ ನಿಮ್ತಿತಾ-ಕಟ್ವಾ ಪ್ಯಾಸೆಂಜರ್ ರೈಲು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ತಕ್ಷಣ ಚಿಕಿತ್ಸೆಗಾಗಿ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದಾರೆ. ರೈಲ್ವೆ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button