ರಾಜ್ಯ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ – ಕರ್ನಾಟಕ ಮೂಲದ ಪೈಲಟ್‌ ಸೇರಿ ಇಬ್ಬರು ಸಾವು!

Training aircraft crashes in Kanpur – Two dead, including a pilot from Karnataka!

ಕಾನ್ಪುರ : ಉತ್ತರ ಪ್ರದೇಶದ ಕಾನ್ಪುರದ ಗಂಗಾ ಬ್ಯಾರೇಜ್​ ಬಳಿ ತರಬೇತಿ ವಿಮಾನವೊಂದು ಪತನಗೊಂಡಿದ್ದು, ಕರ್ನಾಟಕ ಮೂಲದ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

ಕಾನ್ಪುರದ ಗಂಗಾ ಬ್ಯಾರೇಜ್ ಸಮೀಪದ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ತರಬೇತಿ ವಿಮಾನ ದುರಂತದಲ್ಲಿ ಮುಖ್ಯ ಬೋಧಕ ಪೈಲಟ್ ಹಾಗೂ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಇಂದು ಬೆಳಗ್ಗೆ ಸುಮಾರು 11.30ರ ಸುಮಾರಿಗೆ ವಿಮಾನ ಪತನಗೊಂಡಿದ್ದು, ಅಪಘಾತಕ್ಕೀಡಾದ ನಾಲ್ಕು ಆಸನಗಳ ಲಘು ವಿಮಾನವು ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದ ಸ್ಥಳದಲ್ಲಿ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಯಾವುದಾದರೂ ವಸ್ತುವಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

ಘಟನೆ ಕುರಿತು ಮೃತರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದ್ದು, ವಿಮಾನ ಪತನಕ್ಕೆ ಕಾರಣದ ಪರಿಸ್ಥಿತಿಗಳ ಕುರಿತು ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

Comments (0)

Your email address will not be published. Required fields are marked *

Back to top button