ಬೆಂಗಳೂರು:  ಚಿನ್ನ  ಖರೀದಿಸಿ ವಂಚಿಸಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು  ಬಂಧಿಸಿದ್ದಾರೆ. ಗಣ್ಯರ ಹೆಸರ ಹೇಳಿಕೊಂಡು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಕೋಲಾರದ ಮಾಜಿ ಸಚಿವ ವರ್ತೂರು ಪ್ರಕಾಶ್  ಹೆಸರು ಕೇಳಿ ಬಂದಿದೆ.

2.42 ಕೋಟಿ ವಂಚನೆ

2.945 ಕೆಜಿ ಚಿನ್ನ ಖರೀದಿಸಿ 2.42 ಕೋಟಿ ವಂಚಿಸಿದ ಆರೋಪದಲ್ಲಿ ಬಾಗಲಗುಂಟೆ ನಿವಾಸಿ ಶ್ವೇತಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಚಿನ್ನ, ಕಾರು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಅವಿನ್ಯೂ ರಸ್ತೆಯ ಜ್ಯುವೆಲ್ಲರಿ ಶಾಪ್ ನಲ್ಲಿ ಚಿನ್ನಾಭರಣ ಖರೀದಿಸಿ ಹಣ ನೀಡದೆ ವಂಚನೆ ಮಾಡಿರುವುದಾಗಿ ದೂರು ಬಂದ ಹಿನ್ನೆಲೆ ಎಸಿಪಿ ಗೀತಾ ನೇತೃತ್ವದ ತಂಡದಿಂದ ತನಿಖೆ ನಡೆಸಿದ್ದಾರೆ.

ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಎಂದು ಹೇಳಿಕೊಂಡಿದ್ದಾಳೆ

ಮೈಸೂರಿನಲ್ಲಿದ್ದ ಶ್ವೇತಳನ್ನು ಪೊಲೀಸರು ಬಂಧಿಸಿ ಕರೆತಂದಿದ್ದಾರೆ. ಇನ್ನೂ ಈಕೆ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಎಂದು ಹೇಳಿಕೊಂಡಿದ್ದಾಳೆ. ಚಿನ್ನದ ವ್ಯಾಪಾರಿ ಎಂದು ಹೇಳಿಕೊಂಡು ಸಗಟು ದರದಲ್ಲಿ ಆಭರಣ ಖರೀದಿಸಿ ವಂಚನೆ ಮಾಡಿದ್ದಾಳೆ.

ಕಮರ್ಷಿಯಲ್ ಸ್ಟ್ರೀಟ್ ಠಾಣೆಗೆ ದೂರು

ಕಮರ್ಷಿಯಲ್ ಸ್ಟ್ರೀಟ್‌ ರಸ್ತೆಯಲ್ಲಿರುವ ಜ್ಯುವೆಲ್ಲರಿ ಶಾಪ್‌ ಮಾಲೀಕನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಳಿಕ ಬರೋಬ್ಬರಿ 2 ಕೋಟಿ ಮೌಲ್ಯದ ಚಿನ್ನ ಖರೀದಿಸಿದ್ದಾಳೆ. ಬಳಿಕ ಚಿನ್ನವನ್ನು ವಾಪಸ್ ನೀಡದೆ ಹಣವನ್ನೂ ನೀಡದೆ ವಂಚನೆ ಮಾಡಿದ್ದಾಳೆ. ಈ ಬಗ್ಗೆ ಜ್ಯುವೆಲರ್ಸ್‌ ಮಾಲೀಕ ಕಮರ್ಷಿಯಲ್ ಸ್ಟ್ರೀಟ್ ಠಾಣೆಗೆ ದೂರು ನೀಡಿದ್ದರು.

Leave a Reply

Your email address will not be published. Required fields are marked *

Verified by MonsterInsights