ಅಂಜಾವ್: ದಿನಗೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ವೊಂದು ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಕಂದಕಕ್ಕೆ ಉರುಳಿ ಬಿದ್ದು. ಕನಿಷ್ಠ 22 ಜನ ಸಾವನ್ನಪ್ಪಿದ್ದಾರೆ..
ಬೆಟ್ಟದ ರಸ್ತೆಯಿಂದ ಟ್ರಕ್ ನಿಯಂತ್ರಣ ಕಳೆದುಕೊಂಡು ಸುಮಾರು 1000 ಅಡಿಗಳಷ್ಟು ಕಡಿದಾದ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.. ಟಿನ್ಸುಕಿಯಾದ ಗೆಲಾಪುಖುರಿ ಟೀ ಎಸ್ಟೇಟ್ನ ಕಾರ್ಮಿಕರು ಕೆಲಸಕ್ಕಾಗಿ ಹಯುಲಿಯಾಂಗ್ಗೆ ಪ್ರಯಾಣಿಸುತ್ತಿದ್ದಾಗ ಅವಘಡ ಸಂಭವಿಸಿದೆ.. ಘಟನಾ ಸ್ಥಳದಲ್ಲಿ ರಕ್ಷಂಆ ತಂಡಗಳು, ಸ್ಥಳೀಯ ಅಧಿಕಾರಿಗಳು ಹಾಗೂ ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಚರಣೆ ನಡೆಸುತ್ತಿದ್ದು, ಮೃತ ದೇಹಗಳನ್ನು ಹೊರ ತೆಗೆಯುತ್ತಿದ್ದಾರೆ.. ಉಳಿದವರನ್ನ ಪತ್ತೆ ಹಚ್ಚಲು ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ಧಾರೆ..


