ತುಮಕೂರು : ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ತುಮಕೂರು ಜಿಲ್ಲಾ ಬಿಜೆಪಿ ಘಟಕದಿಂದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಶಾಸಕ ಜ್ಯೋತಿಗಣೇಶ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದೆ. ರಾಮ ವಿರೋಧಿ, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಕೂಗಿ ಆಕ್ರೊಶ ವ್ಯಕ್ತಪಡಿಸಿದರು. ಕೂಡಲೆ ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.