Wednesday, April 30, 2025
32 C
Bengaluru
LIVE
ಮನೆಜಿಲ್ಲೆಮಿನಿ ಟೆಂಪೋಗೆ ಬೈಕ್ ಡಿಕ್ಕಿ; ಇಬ್ಬರು ಸಾವು

ಮಿನಿ ಟೆಂಪೋಗೆ ಬೈಕ್ ಡಿಕ್ಕಿ; ಇಬ್ಬರು ಸಾವು

ತುಮಕೂರು: ನಿಂತಿದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಅಪಘಾತ ನಡೆದಿದೆ.

ಅಪಘಾತದಲ್ಲಿ ಪ್ರಭುಗೌಡ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವ ಆನಂದ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಮೃತರು ಉತ್ತರ ಕರ್ನಾಟಕ ಮೂಲದವರು ಎಂದು ಹೇಳಲಾಗುತ್ತಿದೆ.
ಪಂಚರ್ ಆಗಿ ನಿಂತಿದ್ದ ಮಿನಿ ಟೆಂಪೋ ಲಾರಿಗೆ ಬೈಕ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments