ತುಮಕೂರು : ಶಾಲೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ನಡೆದಿದೆ.

ಇನ್ನು, ಜೇನು ದಾಳಿಯಲ್ಲಿ 16 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾಲೆಯ ಪಕ್ಕದಲ್ಲಿರುವ ತೋಟದಲ್ಲಿ ಜೇನು ಗೂಡು ಕಟ್ಟಿದೆ. ಇಂದು ಬೆಳಿಗ್ಗೆ ಶಾಲೆ ಆರಂಭಕ್ಕೂ ಮೊದಲು ಆವರಣದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಮಕ್ಕಳ ಮೇಲೆ ಜೇನು ನೋಣಗಳು ಏಕಾಏಕಿ ದಾಳಿ ಮಾಡಿದೆ.

ಅದಲ್ಲದೇ ಜೇನು ಕಚ್ಚಿದ ಪರಿಣಾಮದಿಂದಾಗಿ ಮಕ್ಕಳ ಬೆನ್ನು, ಕುತ್ತಿಗೆ, ಮುಖ, ತಲೆಗೆ ಗಾಯಗೊಂಡಿದ್ದು, ಕೂಡಲೇ ವಿದ್ಯಾರ್ಥಿಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನು ಸ್ಥಳಕ್ಕೆ ಶಿರಾ ತಹಶೀಲ್ದಾರ್ ದತ್ತಾತ್ರೇಯ, ಡಿವೈಎಸ್ಪಿ ಶೇಖರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಅಧಿಕಾರಿಗಳು