Thursday, November 20, 2025
21.7 C
Bengaluru
Google search engine
LIVE
ಮನೆ#Exclusive NewsTop News2ನೇ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

2ನೇ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ವಿಜಯನಗರ: 2ನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

ವಿಜಯನಗರ ಜಿಲ್ಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ಗೆ ತಾತ್ಕಾಲಿಕ ಗೇಟ್ ಅಳವಳಡಿಕೆಯ 25 ದಿನಗಳ ಬಳಿಕ ಡ್ಯಾಂ ಭರ್ತಿಯಾಗಿದೆ. ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯ ಮತ್ತೆ ಭರ್ತಿ ಹಿನ್ನೆಲೆ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಬಾಗಿನ ಅರ್ಪಣೆ ಕಾರ್ಯಕ್ರಮದ ಸಲುವಾಗಿ ತುಂಗಭದ್ರಾ ಜಲಾಶಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಜಲಾಶಯದ ಸೇತುವೆಯ ಮೇಲೆ ಕನ್ನಡ ಧ್ವಜಗಳು ರಾರಾಜಿಸುತ್ತಿವೆ. ಅಲ್ಲದೇ ತಳಿರು ತೋರಣ, ಬಾಳೆಯಿಂದ ಜಲಾಶಯಯವನ್ನು ಅಲಂಕರಿಸಲಾಗಿದೆ.

ಕ್ರಸ್ಟ್ ಗೇಟ್ ಕಿತ್ತುಹೋದ ಸಂದರ್ಭದಲ್ಲಿ ಸಿಎಂ ವೀಕ್ಷಣೆಗೆ ಆಗಮಿಸಿದ್ದರು. ಈ ವೇಳೆ ಮತ್ತೆ ಜಲಾಶಯ ತುಂಬುತ್ತೆ. ನಾನು ಬಾಗಿನ ಅರ್ಪಣೆ ಮಾಡಲು ಬರುವೆ ಎಂದು ಹೇಳಿದ್ದರು. ಅದೇ ರೀತಿ ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಇಂದು ಬಾಗಿನ ಅರ್ಪಿಸಲಿದ್ದಾರೆ. ಬೆಳಗ್ಗೆ 11:0ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಜೊತೆ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಸಚಿವರು, ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments