Top Newsರಾಜ್ಯಸುದ್ದಿ

ಬಳ್ಳಾರಿ ಬಿಮ್ಸ್​​ನಲ್ಲಿ ನಿಲ್ಲದ ಬಾಣಂತಿಯರ ಮರಣ: 2 ದಿನಗಳ ಅಂತರದಲ್ಲಿ ಇಬ್ಬರು ಸಾವು!

ಬಳ್ಳಾರಿ: ಇಲ್ಲಿನ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕೇವಲ ಎರಡು ದಿನಗಳ ಅಂತರದಲ್ಲಿ ಇಬ್ಬರು ಬಾಣಂತಿಯರು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ ಬಾಣಂತಿ ರೇಷ್ಮಾ ಬಿ(25) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ರೇಷ್ಮಾ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ರೇಷ್ಮಾ ಬಿ ಅವರು ಜವರಿ 4 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ರೇಷ್ಮಾ ಅವರಿಗೆ ನಾರ್ಮಲ್ ಹೆರಿಗೆ ಆಗುತ್ತೆ ಅಂತ ವೈದ್ಯರು ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಿಸಿಕೊಂಡಿದ್ದಾರೆ. ಎರಡು ದಿನದ ಬಳಿಕ ಜನವರಿ 6 ರಂದು ನಾರ್ಮಲ್ ಹೆರಿಗೆ ಕೃಷ್ಣ ಹೀಗಾಗಿ ಸಿಜರಿಯನ್ ಮೂಲಕ ಹೆರಿಗೆ ಮಾಡಬೇಕು ಅಂತ ಹೇಳಿ ಸಿಜರಿಯನ್ ಮಾಡಿದ್ದಾರೆ. ಗಂಡು ಮಗು ಜನಿಸಿದೆ. ತಾಯಿ ಮತ್ತು ಮಗುವಿನ ಆರೋಗ್ಯ ಚೆನ್ನಾಗಿದೆ ಅಂತ ವೈದ್ಯರು ಕುಟುಂಬಸ್ಥರಿಗೆ ಹೇಳಿದ್ದಾರೆ.

ಆರಂಭದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ ಚೆನ್ನಾಗಿದೆ. ಇನ್ನೂ ಜನವರಿ 8ರಂದು ತಾಯಿ ಮಗುವನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದಾರೆ. ಅದರೆ, ಮನೆಗೆ ಹೋಗಿ ವಾರದ ಬಳಿಕ ರೇಷ್ಮಾಗೆ ಆಯಾಸ, ಉಸಿರಾಟದ ಸಮಸ್ಯೆ ಕಂಡು ಬಂದಿದೆ. ಹೀಗಾಗಿ, ಜನವರಿ 14 ರಂದು ಮತ್ತೆ ಬಮ್ಸ್ ಆಸ್ಪತ್ರೆಗೆ ಬಾಣಂತಿ ರೇಷ್ಮಾರನ್ನು ದಾಖಲು ಮಾಡಿದ್ದಾರೆ. ಸತತ 21 ದಿನಗಳಿಂದ ವೈದ್ಯೆರು ಚಿಕಿತ್ಸೆ ನೀಡಿದ್ದಾರೆ. ಆದರೆ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ರೇಷ್ಮಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ರೇಷ್ಮ ಮೃತಪಟ್ಟಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಇನ್ನೂ ನನ್ನ ಮಗಳನ್ನ ವೈದ್ಯರೇ ಕೊಲೆ ಮಾಡಿದ್ರು. ಸರಿಯಾಗಿ ಚಿಕಿತ್ಸೆ ಕೊಟ್ಟಿಲ್ಲ, ವೈದ್ಯರು ನಿರ್ಲಕ್ಷ್ಯ ಮಾಡಿದ್ದಕ್ಕೆ ಸಾವಾಗಿದೆ ಅಂತಾ ಕುಟುಂಬಸ್ಥರು ಕಣ್ಣೀರಿಡ್ತಿದ್ದಾರೆ. ಇನ್ನು ಕಳೆದ ಭಾನುವಾರವೂ ಕುರಗೋಡು ತಾಲೂಕಿನ ಕೋಳೂರು ಗ್ರಾಮದ 21 ವರ್ಷದ ಮಹಾದೇವಿ ಎಂಬುವವರ ಸಾವಾಗಿತ್ತು. ಮಹಾದೇವಿ ಕುಟುಂಬಸ್ಥರೂ ವೈದ್ಯರ ನಿರ್ಲಕ್ಷ್ಯದ ಆರೋಪ ಮಾಡಿದ್ರು. ಹೀಗಾಗಿ ಬಾಣಂತಿಯರ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕು ಅಂತಾ ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button