Top Newsಕ್ರೈಂ ಸ್ಟೋರಿಸುದ್ದಿ

ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ – ನರೇಗಾ ಇಂಜಿನಿಯರ್ ಶರಣ್ಯಾ ಗೌಡ ಸ್ಥಳದಲ್ಲೇ ಸಾವು!

ರಾಮನಗರ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ನರೇಗಾ ಎಂಜಿನಿಯರ್ (Narega) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಸಾಪುರ ಗೇಟ್ ಬಳಿ ನಡೆದಿದೆ.

ಈ ಘಟನೆ ನಿನ್ನೆ ಸಂಜೆ ವೇಳೆ ಹಲಗೂರು ಸಮೀಪದ ಬಸಾಪುರ ಗೇಟ್ ಬಳಿ ನಿನ್ನೆ ನಡೆದಿದೆ. ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಈ ವೇಳೆ ನೆಲಕ್ಕೆ ಅಪ್ಪಳಿಸಿ ಬಿದ್ದ ಇಂಜಿನಿಯರ್ ಶರಣ್ಯಾ ಗೌಡ (25) ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದವಳಾದ ಶರಣ್ಯಾ ಗೌಡ, ಕಳೆದ ಒಂದು ವರ್ಷದಿಂದ ಕನಕಪುರ ವಿಭಾಗದಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು.

ಶನಿವಾರ ಅವಘಡ ಸಂಭವಿಸಿದ್ದು, ಕಳೆದ ಒಂದು ವರ್ಷದಿಂದ ಕನಕಪುರ ತಾಲೂಕಿನ ಸಾತನೂರು ಪಂಚಾಯತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಇದೇ ಫೆ.16 ರಂದು ಶರಣ್ಯ ವಿವಾಹ ನಿಶ್ಚಯವಾಗಿತ್ತು. ಶರಣ್ಯ ಬಳೆಹೊನ್ನಿಗ ಗ್ರಾಮದಿಂದ ಹಲಗೂರು ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳೀಯ ಹಲಗೂರು ಠಾಣೆ ಪೊಲೀಸರು ಬಂದು ಸ್ಥಳ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹವನ್ನು ಖಾಸಗಿ ಕ್ಯಾಂಟರ್ ವಾಹನದ ಮೂಲಕವೇ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Comments (0)

Your email address will not be published. Required fields are marked *

Back to top button