Thursday, September 11, 2025
27.2 C
Bengaluru
Google search engine
LIVE
ಮನೆ#Exclusive NewsTop Newsಪತ್ರಕರ್ತೆ ಪ್ರಶ್ನೆಗೆ ಉಡಾಫೆ ಉತ್ತರ.. ದೇಶಪಾಂಡೆ ಹೇಳಿಕೆ ವಿರುದ್ಧ ಜೆಡಿಎಸ್​ ಆಕ್ರೋಶ

ಪತ್ರಕರ್ತೆ ಪ್ರಶ್ನೆಗೆ ಉಡಾಫೆ ಉತ್ತರ.. ದೇಶಪಾಂಡೆ ಹೇಳಿಕೆ ವಿರುದ್ಧ ಜೆಡಿಎಸ್​ ಆಕ್ರೋಶ

ಉತ್ತರ ಕನ್ನಡದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ವಿಚಾರಕ್ಕೆ ಪತ್ರಕರ್ತೆಯೋರ್ವರ ಪ್ರಶ್ನೆಗೆ ಶಾಸಕ ದೇಶಪಾಂಡೆ ಅವರು ಉಢಾಫೆ ಉತ್ತರ ನೀಡಿರುವುದಕ್ಕೆ ಜೆಡಿಎಸ್​ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ..

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ವಿಷಯವಾಗಿ ಪತ್ರಕರ್ತೆಯೊಬ್ಬರು ಪ್ರಶ್ನೆ ಮಾಡಿದ್ದಕ್ಕೆ ಹಿರಿಯ ಶಾಸಕ ಆರ್​.ವಿ.ದೇಶಪಾಂಡೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇಲ್ಲಿ ಜನರ ಪರಿಸ್ಥಿತಿ ಗಮನ ಹರಿಸಿ, ನಿಮ್ಮ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿಮ್ಮ ಅವಧಿಯಲ್ಲಿ ಆಗುತ್ತಾ ಎಂದು ಪ್ರಶ್ನೆ ಕೇಳಿದ್ದರು. ಇದಕ್ಕೆ ಉತ್ತರಿಸಿದ ಶಾಸಕ ಆರ್​.ವಿ.ದೇಶಪಾಂಡೆ ‘ನಿಂದೇನಾದ್ರೂ ಹೆರಿಗೆ ಮಾಡಿಸಬೇಕಾ ಹೇಳು.. ಮಾಡಿಸ್ತೀನಿ ಎಂದು ಅವಹೇಳನಕಾರಿ ಹೇಳಿಕೆ ನೀಡಿ, ಅಪಮಾನ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಜೆಡಿಎಸ್ ದೇಶಪಾಂಡೆ ಅವರೇ ನಿಮ್ಮದು ಅದೆಂತಹ ಕೀಳು ಮನಸ್ಥಿತಿ ? ಜಿಲ್ಲೆಗೆ ಒಂದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕಲ್ಪಿಸಿಕೊಡಿ ಅಂತ ಪ್ರಶ್ನೆಮಾಡಿದ ಹಿರಿಯ ಪತ್ರಕರ್ತೆಗೆ ನಿನ್ನ ಹೆರಿಗೆಯಾಗಲಿ ಎನ್ನುವುದು, ನೀವು ಸ್ತ್ರೀಯರಿಗೆ ಕೊಡುವ ಗೌರವವೇ ? ಹಿರಿಯ ಶಾಸಕರಾಗಿರುವ ದೇಶಪಾಂಡೆ ಅವರೇ, ನಿಮ್ಮ ಈ ಉದ್ಧಟತನ ಮಾತುಗಳು ಮಹಿಳೆಯರ ಕುಲಕ್ಕೆ ಮಾಡಿರುವ ಅಪಮಾನ. ಈ ಕೂಡಲೇ ಆ ಮಹಿಳಾ ಪತ್ರಕರ್ತೆಗೆ ಕ್ಷಮೆ ಕೇಳಿ ಎಂದು ಆಗ್ರಹಿಸಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments