ಕ್ರೈಂ ಸ್ಟೋರಿರಾಜಕೀಯರಾಜ್ಯ

ಉದಯಗಿರಿ ಗಲಭೆ; ಎಂಟು ಆರೋಪಿಗಳ ಬಂಧನ

ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್‌ ಮೀಡಿಯಾ ಪೋಸ್ಟ್ ನಿಂದ ಸಾಂಸ್ಕೃತಿಕ ನಗರಿಯಲ್ಲಿ ಆಕ್ರೋಶ ಭುಗಿಲೇದ್ದಿದೆ . ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ. ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರವನ್ನು ವ್ಯಂಗ್ಯವಾಗಿ ಹಾಕಲಾಗಿತ್ತು.

ವ್ಯಂಗ್ಯವಾಗಿ ಹಾಕಿದ್ದಷ್ಟೇ ಆಗಿದ್ದರೆ ಯಾವುದೇ ಸಮಸ್ಯೆ ಆಗುತ್ತಿರಲಿಲ್ಲ. ಆದರೆ, ಆ ಪೋಸ್ಟ್‌ನಲ್ಲಿ ಒಂದು ಪ್ರತ್ಯೇಕ ಧರ್ಮಕ್ಕೆ ಅವಮಾನ ಮಾಡುವ ರೀತಿ ವಾಕ್ಯಗಳನ್ನು ಬರೆಯಲಾಗಿತ್ತು. ಇದು ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದೆ.

ಉದ್ರಿಕ್ತ ಗುಂಪಿನಿಂದ ಪೋಲಿಸ್ ಠಾಣೆ ಮೇಲೆ ಕಲ್ಲು..!

ಯಾವಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತೋ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆ ಪೋಸ್ಟ್ ಒಂದು ಸಮುದಾಯದ ಯುವಕರನ್ನು ರೊಚ್ಚಿಗೆಬ್ಬಿಸಿತ್ತು. ತಕ್ಷಣ ಅವರು ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸರು, ಕೆಲ ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರು ಅಲ್ಲಿದ್ದ ಯುವಕರಿಗೆ ಶಾಂತಿ ಕಾಪಾಡುವಂತೆ ಮನವರಿಕೆ ಮಾಡಲು ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಗುಂಪು ಇದನ್ನು ಕೇಳಲು ಸಿದ್ಧರಿರಲಿಲ್ಲ.‌ ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸರು ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದರು

ಉದ್ರಿಕ್ತ ಗುಂಪಿನ ಪೋಲಿಸ್ ಲಾಠಿಚಾರ್ಜ್..!

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಅದಕ್ಕೂ ಬಗ್ಗದೇ ಹೋದಾಗ ಅಶ್ರುವಾಯು ಸಿಡಿಸಿ ಯುವಕರ ಗುಂಪನ್ನು ಚದುರಿಸಲಾಯಿತು. ಅಶ್ರುವಾಯು ಸಿಡಿಸಿದ ತಕ್ಷಣ ಗುಂಪು ಚೆಲ್ಲಾಪಿಲ್ಲಿಯಾಗಿ ಓಡಿ ಹೋಯಿತು

ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ; ಹೆಚ್ಚುವರಿ ಪೋಲಿಸ್ ನಿಯೋಜನೆ

ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸರು ಉದಯಗಿರಿ ಪೊಲೀಸ್ ಠಾಣೆ ಬಳಿಗೆ ಹೆಚ್ಚಿನ ಪೊಲೀಸರನ್ನು ಕರೆಸಿದ್ದಾರೆ. ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸ್ಥಳಕ್ಕೆ ಆಗಮಿಸಿ, ಸ್ಥಳದಲ್ಲಿದ್ದವರಿಗೆ ಬುದ್ದಿ ಮಾತು‌ ಹೇಳಿದ್ದಾರೆ. ಡಿಸಿಪಿ ಮುತ್ತುರಾಜ್ ಜೊತೆಗೂಡಿ ಶಾಂತಿ ಕಾಪಾಡುವಂತೆ ಯುವಕರಲ್ಲಿ ಮನವಿ ಮಾಡಿದ್ದಾರೆ.

ಉದಯಗಿರಿ ಉದ್ವಿಗ್ನ; ರಾಜಕೀಯ ಕೆಸರೆರಚಾಟ

ಘಟನೆ ನಡೆದ ಬಳಿಕ ಪೋಲಿಸ್ ಠಾಣೆ ಬಂದ ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿದ್ದಾರೆ. ಈ ವೇಳೆ ಡಿಸಿಪಿ ಮುತ್ತುರಾಜ್ ಠಾಣೆಯಿಂದ ಹೋಗುವಂತೆ ಮನವಿ ಮಾಡಿಕೊಂಡರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿರುವ ಪ್ರತಾಪ್ ಸಿಂಹ.. ಪುಂಡ ಮುಸ್ಲಿಮರು ನಿನ್ನೆ ಅಕ್ರಮಣ ಮಾಡಿದ್ದಾರೆ. ಮೈಸೂರಿನಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಪೊಲೀಸರನ್ನೇ ಗುರಿಯಾಗಿಸಿ ಇಲ್ಲಿ ಯಾವಾಗಲೂ ದಾಳಿ ಆಗುತ್ತದೆ. ಈಗಲೂ ಅದೇ ಮುಂದುವರಿದಿದೆ. ಟಿಪ್ಪು ಸಂತತಿ ಮಾಡಿರುವ ಗಲಾಟೆ ಇದಾಗಿದೆ. ಸಿದ್ದರಾಮಯ್ಯ ಆಡಳಿತ ಹೇಗಿದೆ ಎಂಬುವುದಕ್ಕೆ ಇದು ಸಾಕ್ಷಿ. ಸಿದ್ದರಾಮಯ್ಯ ಅವರದ್ದು ತಾಲಿಬಾನಿ ಸರ್ಕಾರ. ಪೊಲೀಸರು ಆಳುವ ಸರ್ಕಾರದ ಅಣತಿಯಂತೆ ನಡೆಯುವುದು ಮೊದಲು ಬಿಡಬೇಕು. ಕೇಜ್ರಿವಾಲ್ ಸೋತರೆ ಉದಯಗಿರಿ ಮುಸ್ಲಿಮರಿಗೆ ಯಾಕೆ ರೋಷ ಬರುತ್ತೆ? ಎಂದು ಪ್ರಶ್ನೆ ಮಾಡಿದ್ದಾರೆಪೊಲೀಸ್ ಠಾಣೆಗೆ ಬರ್ತಿದ್ದಂತೆಯೇ ಡಿಸಿಪಿ ಮುತ್ತುರಾಜ್ ಠಾಣೆಯಿಂದ ಹೋಗುವಂತೆ ಮನವಿ ಮಾಡಿಕೊಂಡರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿರುವ ಪ್ರತಾಪ್ ಸಿಂಹ.. ಪುಂಡ ಮುಸ್ಲಿಮರು ನಿನ್ನೆ ಅಕ್ರಮಣ ಮಾಡಿದ್ದಾರೆ. ಮೈಸೂರಿನಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಪೊಲೀಸರನ್ನೇ ಗುರಿಯಾಗಿಸಿ ಇಲ್ಲಿ ಯಾವಾಗಲೂ ದಾಳಿ ಆಗುತ್ತದೆ. ಈಗಲೂ ಅದೇ ಮುಂದುವರಿದಿದೆ. ಟಿಪ್ಪು ಸಂತತಿ ಮಾಡಿರುವ ಗಲಾಟೆ ಇದಾಗಿದೆ. ಸಿದ್ದರಾಮಯ್ಯ ಆಡಳಿತ ಹೇಗಿದೆ ಎಂಬುವುದಕ್ಕೆ ಇದು ಸಾಕ್ಷಿ. ಸಿದ್ದರಾಮಯ್ಯ ಅವರದ್ದು ತಾಲಿಬಾನಿ ಸರ್ಕಾರ. ಪೊಲೀಸರು ಆಳುವ ಸರ್ಕಾರದ ಅಣತಿಯಂತೆ ನಡೆಯುವುದು ಮೊದಲು ಬಿಡಬೇಕು. ಕೇಜ್ರಿವಾಲ್ ಸೋತರೆ ಉದಯಗಿರಿ ಮುಸ್ಲಿಮರಿಗೆ ಯಾಕೆ ರೋಷ ಬರುತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ

ಇದೀಗ ಪ್ರಕರಣದ ಕುರಿತು ರಾಜಕೀಯ ಕೇಸರೆರಚಾಟ ಶುರುವಾಗಿದ್ದು, ಎರಡು ಪಕ್ಷಗಳ ಮಧ್ಯೆ ವಾದ – ಪ್ರತಿವಾದ ಶುರವಾಗಿದೆ. ಸದ್ಯ ಘಟನೆ ಬಳಿಕ ತೀವ್ರಗತಿಯಲ್ಲಿ ತನಿಖೆ ನಡೆಸಿದ ಪೋಲಿಸರು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಶಾಂತಿನಗರದ ನಿವಾಸಿಗಳಾದ ಸುಹೇಲ್ ರಹಿಲ್ ಪಾಶಾ, ಅಯಾನ್ ಬಿನ್ ಜಬೀವುಲ್ಲಾ, ಗೌಸಿಯಾ ನಗರದ ಸೈಯದ್ ಸಾದಿಕ್ ಬಿನ್ ನವೀದ್, ಸತ್ಯನಗರದ ಇಜಾಜ್ ಬಿನ್ ಅಬ್ದುಲ್ ವಾಜೀದ್, ರಾಜೀವ್ ನಗರದ ಸಾದಿಕ್ ಪಾಶಾ @ ಖಾಲಿದ್ ಪಾಷಾ ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ

Comments (0)

Your email address will not be published. Required fields are marked *

Back to top button