ಮುಂಬೈ : ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಅವರು ಶನಿವಾರ ಮುಂಬರುವ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿಯಿಂದ ಹೊರಬಂದು ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ಲೋಕಸಭೆ ಅಥವಾ ರಾಜ್ಯ ವಿಧಾನಸಭೆ ಚುನಾವಣೆಗಿಂತ ಹೆಚ್ಚಿನ ಆಕಾಂಕ್ಷಿಗಳು ಇರುವುದರಿಂದ ಪಕ್ಷದ ಕಾರ್ಯಕರ್ತರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋಗಬೇಕೆಂದು ಪಕ್ಷದ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದರು.
“ಬಿಎಂಸಿ ಚುನಾವಣೆಗೆ ಉದ್ಧವ್ ಠಾಕ್ರೆ ಮತ್ತು ಇತರ ಪಕ್ಷದ ನಾಯಕರ ನಡುವೆ ಮಾತುಕತೆ ನಡೆಯುತ್ತಿದೆ. ಕಾರ್ಯಕರ್ತರು ಪಕ್ಷವು ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಬಯಸುತ್ತಾರೆ” ಎಂದು ಅವರು ಹೇಳಿದರು.